ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರ: ಒಂಟಿ ಮಹಿಳೆಯ ಮನೆಗೆ ನುಗ್ಗಲು ಯತ್ನ: ಸ್ಥಳೀಯರಿಂದ ಓರ್ವ ಆರೋಪಿ ಸೆರೆ

ಒಂಟಿ ಮಹಿಳೆಯೊಬ್ಬರು ವಾಸವಿದ್ದ ಮನೆಯ ಬಾಗಿಲು ಮುರಿದು ಕಳವು ಮಾಡಲು ಯತ್ನಿಸಿದ ಮೂವರು ಆರೋಪಿಗಳ ಪೈಕಿ ಓರ್ವನನ್ನು ಸ್ಥಳೀಯರು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಜೇಶ್ವರದ ಕುಂಜತ್ತೂರು ಯತೀಂಖಾನ ರಸ್ತೆಯಲ್ಲಿ ನಡೆದಿದೆ. ಇನ್ನಿಬ್ಬರು ಆರೋಪಿಗಳು ಕತ್ತಲಿನ ಲಾಭ ಪಡೆದು ಸ್ಥಳದಿಂದ ಪರಾರಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಜಾರ್ಖಂಡ್ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೂವರು ಆರೋಪಿಗಳು ಮಹಿಳೆಯೊಬ್ಬರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿರುವುದನ್ನು ಗಮನಿಸಿ ಕಳವಿಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಅದರಂತೆ ಮನೆಯ ಬಾಗಿಲು ಮುರಿದು ಒಳನುಗ್ಗಲು ಯತ್ನಿಸಿದ್ದಾರೆ.

ಈ ಸಂದರ್ಭದಲ್ಲಿ ಬಾಗಿಲು ಮುರಿಯುವ ಶಬ್ದ ಕೇಳಿದ ಮಹಿಳೆ ಎಚ್ಚೆತ್ತುಕೊಂಡು ಜೋರಾಗಿ ಬೊಬ್ಬೆ ಹಾಕಿದ್ದಾರೆ. ಮಹಿಳೆಯ ಕೂಗಾಟ ಕೇಳಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಪರಾರಿಯಾಗಲು ಯತ್ನಿಸಿದ ಮೂವರಲ್ಲಿ ಓರ್ವನನ್ನು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಆದರೆ ಉಳಿದ ಇಬ್ಬರು ಆರೋಪಿಗಳು ಕತ್ತಲಿನಲ್ಲಿ ತಪ್ಪಿಸಿಕೊಂಡಿದ್ದಾರೆ.

ಇದೇ ವೇಳೆ ತೂಮಿನಾಡು, ಕುಂಜತ್ತೂರು, ಉದ್ಯಾವರ ಹಾಗೂ ಮಂಜೇಶ್ವರ ಪರಿಸರದಲ್ಲಿ ಹೊರರಾಜ್ಯದ ಕೆಲವರು ಮುಂಜಾನೆ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪರಾರಿಯಾಗಿರುವ ಇಬ್ಬರು ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಬಂಧಿಸಬೇಕು. ಮಂಜೇಶ್ವರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿ ಹಾಗೂ ಮುಂಜಾನೆ ಪೊಲೀಸ್ ಗಸ್ತು ಹೆಚ್ಚಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಘಟನೆಯಿಂದಾಗಿ ಕುಂಜತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮನೆಗಳ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಆತಂಕ ಮೂಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!