ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಯೆನೆಪೋಯ ಕಾಲೇಜಿಗೆ ನಾಲ್ಕು ರಾಜ್ಯಮಟ್ಟದ ಎನ್‌ಎಸ್‌ಎಸ್ ಪ್ರಶಸ್ತಿ

ಯೆನೆಪೋಯ ವಿಶ್ವವಿದ್ಯಾಲಯದ ಘಟಕ ಸಂಸ್ಥೆಯಾದ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಆಂಡ್ ಮ್ಯಾನೇಜ್‌ಮೆಂಟ್ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಕರ್ನಾಟಕ ಸರ್ಕಾರದ ರಾಜ್ಯಮಟ್ಟದ ಎನ್‌ಎಸ್‌ಎಸ್ ಪ್ರಶಸ್ತಿಗೆ ಕಾಲೇಜಿನ ಒಬ್ಬ ಅಧ್ಯಾಪಕಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಕಾಲೇಜಿನ ಎನ್‌ಎಸ್‌ಎಸ್ ಘಟಕಕ್ಕೂ ಪ್ರಶಸ್ತಿ ಲಭಿಸಿದೆ. ಈ ಮೂಲಕ ಸಂಸ್ಥೆ ಒಟ್ಟು ನಾಲ್ಕು ರಾಜ್ಯಮಟ್ಟದ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.

2023–24ನೇ ಸಾಲಿನ ಅತ್ಯುತ್ತಮ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಕೊಲಿನ್ ಜಾನೆಟ್ ಆಯ್ಕೆಯಾಗಿದ್ದಾರೆ. ಇದೇ ಸಾಲಿನ ಅತ್ಯುತ್ತಮ ಎನ್‌ಎಸ್‌ಎಸ್ ಸ್ವಯಂಸೇವಕ ಪ್ರಶಸ್ತಿಯನ್ನು ವಿದ್ಯಾರ್ಥಿ ಶ್ರೀಜನ್ ಬಿ.ಸಿ. ಪಡೆದುಕೊಂಡಿದ್ದಾರೆ.

2024–25ನೇ ಸಾಲಿನ ಅತ್ಯುತ್ತಮ ಎನ್‌ಎಸ್‌ಎಸ್ ಸ್ವಯಂಸೇವಕಿ ಪ್ರಶಸ್ತಿಗೆ ವಿದ್ಯಾರ್ಥಿನಿ ಸಾನಿಯಾ ಕೆ. ಆಯ್ಕೆಯಾಗಿದ್ದು, ಕಾಲೇಜಿನ ಎನ್‌ಎಸ್‌ಎಸ್ ಘಟಕಕ್ಕೂ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ. ಈ ಸಾಧನೆಯ ಮೂಲಕ ಕಾಲೇಜು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಗಾಳಿ ಮಳೆ ಅಬ್ಬರಕ್ಕೆ ಮನೆಗಳಿಗೆ ಹಾನಿ; ಕೊಟ್ಟಿಗೆಗೆ ಬೆಂಕಿ

ಬೆಂಗಳೂರು: ಬೆಂಗಳೂರಿನ ರಾಜ್ಯೋತ್ಸವ ಸಾಧಕರ ಸಮಾಗಮಕ್ಕೆ ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷ

ಅಬುಧಾಬಿ : ವಕ್ವಾಡಿ ಪ್ರವೀಣ್ ಶೆಟ್ಟಿಯವರಿಗೆ ಅಬುಧಾಬಿ ಕರ್ನಾಟಕ ಸಂಘದ ಪ್ರತಿಷ್ಠಿತ ‘ದ. ರಾ. ಬೇಂದ್ರೆ ಪ್ರಶಸ್ತಿ’

ವಿಟ್ಲ: ಕತ್ತಿ ಬೀಸಿದ ಪರಿಣಾಮ ವ್ಯಕ್ತಿ ಸಾವು: 24 ವರ್ಷದ ಯುವತಿ ಬಂಧನ

ಮಂಗಳೂರು: ವಳಾಲು ಟೋಲ್ ಆರಂಭದ ಬೆನ್ನಲ್ಲೇ ಬ್ರಹ್ಮರಕೂಟ್ಲು ಟೋಲ್‌ಗೆ ಮುತ್ತಿಗೆ

ಮಂಗಳೂರು: ಪತ್ನಿ ಹತ್ಯೆ ಪ್ರಕರಣ: ಪತಿಗೆ 5 ವರ್ಷ ಜೈಲು ಶಿಕ್ಷೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತದ ಅಣಕು ಕಾರ್ಯಾಚರಣೆ

ಕಾಸರಗೋಡು: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಗರಸಭೆ ಉದ್ಯೋಗಿ ಪತ್ತೆ

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

error: Content is protected !!