ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಕಾರು–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ ಸಾವು

ಬೆಂಗಳ ಸಮೀಪದ ನಾಲ್ಕನೇ ಮೈಲಿನಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕಳನಾಡು ನಿವಾಸಿ ಅಶ್ರಫ್ ಅವರ ಪುತ್ರ ಆದಿಲ್ ಅಹಮ್ಮದ್ ಮೃತ ಯುವಕ. ಬೈಕ್‌ನಲ್ಲಿ ಸಹಸವಾರನಾಗಿದ್ದ ಬೀಜಂತಡ್ಕ ನಿವಾಸಿ ಮೊಹಮ್ಮದ್ ಅದಿಲ್ ಕೂಡ ಗಾಯಗೊಂಡಿದ್ದಾನೆ.

ಕಳೆದ ಶುಕ್ರವಾರ ಬೆಂಗಳ ನಾಲ್ಕನೇ ಮೈಲಿನ ಯೂಸ್ಟ್ ಕಾರು ಶೋರೂಂ ಸಮೀಪದ ಸರ್ವೀಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ನಾಲ್ಕನೇ ಮೈಲಿನಿಂದ ಚೆರ್ಕಳದ ಕಡೆಗೆ ತೆರಳುತ್ತಿದ್ದ ಬೈಕ್‌ಗೆ, ವಿರುದ್ಧ ದಿಕ್ಕಿನಿಂದ ಬಂದ ಕಾರು ಇಂಡಿಕೇಟರ್ ನೀಡದೆ ಬಲಕ್ಕೆ ತಿರುಗಿಸಿದಾಗ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಬೈಕ್‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಆದಿಲ್ ಅಹಮ್ಮದ್ ಗಂಭೀರ ಗಾಯಗೊಂಡಿದ್ದರು.

ಗಾಯಾಳುಗಳನ್ನು ತಕ್ಷಣ ಮಂಗಳೂರಿನ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಆದಿಲ್ ಅಹಮ್ಮದ್ ಮೃತಪಟ್ಟಿದ್ದಾರೆ. ಈ ಕುರಿತು ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭಾನುವಾರ ಬೆಳಗ್ಗೆ ಮೇಲ್ಪರಂಬ ಜುಮಾ ಮಸೀದಿ ಆವರಣದಲ್ಲಿ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಮೃತರು ತಾಯಿ ನುಮಯ್ಯ, ಸಹೋದರ ಶಹಸಾದ್ ಹಾಗೂ ಸಹೋದರಿ ಫಾತಿಮಾ ಅವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

error: Content is protected !!