ಜನ ಮನದ ನಾಡಿ ಮಿಡಿತ

Advertisement

ಶಬರಿಮಲೆ: ಪಂಪಾ ನದಿಗೆ ತ್ಯಾಜ್ಯ ಎಸೆದರೆ ₹5 ಸಾವಿರ ದಂಡ….!

ಪಂಪಾ ನದಿಗೆ ಬಟ್ಟೆ, ಪ್ಲಾಸ್ಟಿಕ್ ಸೇರಿದಂತೆ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯುವುದನ್ನು ನಿಷೇಧಿಸಿ ಶಬರಿಮಲೆ ಹೆಚ್ಚುವರಿ ಜಿಲ್ಲಾಧಿಕಾರಿ ದಿಲೀಪ್ ಕೆ. ಕೈನಿಕ್ಕರ ಆದೇಶ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸುವವರಿಗೆ ಸ್ಥಳದಲ್ಲೇ ಗರಿಷ್ಠ ₹5,000 ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

2026-27ನೇ ಸಾಲಿನ ಮಂಡಲ-ಮಕರಜ್ಯೋತಿ ಯಾತ್ರೆಗೆ ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಯಾತ್ರೆಗೂ ಮುನ್ನ ಪಂಪಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವುದು ಸಂಪ್ರದಾಯವಾಗಿದೆ. ಈ ಸಂದರ್ಭದಲ್ಲಿ ಭಕ್ತರು ಬಳಸಿದ ಬಟ್ಟೆಗಳನ್ನು ನದಿ ಹಾಗೂ ಸ್ನಾನಘಟ್ಟಗಳಲ್ಲಿ ಎಸೆಯುತ್ತಿರುವುದರಿಂದ ಪ್ರತಿದಿನ ಟನ್‌ಗಟ್ಟಲೆ ತ್ಯಾಜ್ಯ ಸಂಗ್ರಹವಾಗುತ್ತಿದೆ. ಇದರಿಂದ ಕುಡಿಯುವ ನೀರಿನ ಮೂಲ ಕಲುಷಿತಗೊಳ್ಳುವುದರ ಜತೆಗೆ ಪರಿಸರ ಹಾನಿ ಮತ್ತು ಜಲಜನ್ಯ ರೋಗಗಳ ಹರಡುವ ಆತಂಕ ಎದುರಾಗಿದೆ.

ಪಂಪಾ, ನಿಲಕ್ಕಲ್ ಮತ್ತು ಸನ್ನಿಧಾನಂ ಸೇರಿದಂತೆ ನದಿಯ ಕೆಳಭಾಗದ ಪ್ರದೇಶಗಳ ಜನರಿಗೂ ಪಂಪಾ ನದಿಯೇ ಪ್ರಮುಖ ಜಲಮೂಲವಾಗಿರುವ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಟ್ಟೆ, ವೈಯಕ್ತಿಕ ವಸ್ತುಗಳು, ಪ್ಲಾಸ್ಟಿಕ್ ಸೇರಿದಂತೆ ಯಾವುದೇ ಘನ ಅಥವಾ ಜೈವಿಕ ತ್ಯಾಜ್ಯಗಳನ್ನು ನದಿ, ಉಪನದಿಗಳು, ಸ್ನಾನಘಟ್ಟ ಹಾಗೂ ನದಿ ದಡಗಳಲ್ಲಿ ಎಸೆಯುವಂತಿಲ್ಲ. ವಿಧಿಸಲಾದ ದಂಡವನ್ನು 15 ದಿನಗಳೊಳಗೆ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಸೂಲಾದ ದಂಡದ ಮೊತ್ತವನ್ನು ಪಂಚಾಯತ್ ನಿಧಿಗೆ ಜಮೆ ಮಾಡಿ, ಶಬರಿಮಲೆ ಮತ್ತು ಪಂಪಾ ಪ್ರದೇಶಗಳ ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ ಹಾಗೂ ನದಿ ಸ್ವಚ್ಛತಾ ಕಾರ್ಯಗಳಿಗೆ ಬಳಸಲಾಗುತ್ತದೆ. ನಿಯಮಗಳ ಕುರಿತು ಭಕ್ತರಲ್ಲಿ ಜಾಗೃತಿ ಮೂಡಿಸಲು ವಿವಿಧ ಭಾಷೆಗಳಲ್ಲಿ ಧ್ವನಿವರ್ಧಕಗಳ ಮೂಲಕ ಪ್ರಚಾರ ನಡೆಸುವಂತೆ ಹಾಗೂ ಸೂಚನಾ ಫಲಕಗಳನ್ನು ಅಳವಡಿಸುವಂತೆ ದೇವಸ್ವಂ ಮಂಡಳಿ ಮತ್ತು ಸಂಬಂಧಪಟ್ಟ ಇಲಾಖೆಗಳಿಗೂ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!