ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮರಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ; ಚಾಲಕ ಸ್ಥಳದಲ್ಲೇ ಸಾವು, ಐವರು ಮಹಿಳೆಯರಿಗೆ ಗಾಯ

ಕಾರ್ಕಳ ತಾಲೂಕಿನ ಅಜೆಕಾರು ಸಮೀಪದ ಅಂಡಾರು ಕೊಂದಲ್ಕೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಚಾಲಕ ಸೀತಾರಾಮ ರೈ ಮೃತಪಟ್ಟಿದ್ದು, ವಾಹನದಲ್ಲಿದ್ದ ಐವರು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದಾರೆ.

ವಸಂತಿ, ಲೀಲಾವತಿ, ಶಾಲಿನಿ, ಶೋಭಾ ಮತ್ತು ಪ್ರೇಮ ಗಾಯಗೊಂಡ ಮಹಿಳೆಯರು. ಗಾಯಾಳುಗಳನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಡ್ತಲದ ಹಪ್ಪನಡ್ಕದ ಸದಾನಂದ ಶೆಟ್ಟಿ ಅವರ ಅಡಿಕೆ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಂಡಾರಿನಿಂದ ಕಾಡುಹೊಳೆ ಮಾರ್ಗವಾಗಿ ಸಂಚರಿಸುತ್ತಿದ್ದಾಗ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ.

ಚಾಲನೆ ಮಾಡುತ್ತಿದ್ದ ಸೀತಾರಾಮ ರೈ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದರಿಂದ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!