ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬೈಕ್‌ಗೆ ಕ್ರೇನ್ ಡಿಕ್ಕಿ; ಗಂಭೀರವಾಗಿ ಗಾಯಗೊಂಡ ಸವಾರ ಸಾವು

ಬೈಕ್‌ಗೆ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮರ್ಣೆ ಗ್ರಾಮದ ಅಜೆಕಾರು ದೊಡ್ಡಪಲ್ಕೆ ಕ್ರಾಸ್ ಬಳಿ ನವೆಂಬರ್ 21ರ ರಾತ್ರಿ ನಡೆದಿದೆ. ಅಜೆಕಾರು ಬೊಂಡುಕುಮೇರಿ ನಿವಾಸಿ ಲೋಕೇಶ್ ಕುಲಾಲ್ (ಮೃತರು) ಮೃತ ಬೈಕ್ ಸವಾರ.

ನವೆಂಬರ್ 21ರಂದು ರಾತ್ರಿ ಸುಮಾರು 9 ಗಂಟೆಗೆ ಲೋಕೇಶ್ ಅವರು ಬೈಕ್‌ನಲ್ಲಿ ಅಜೆಕಾರಿನಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ದೊಡ್ಡಪಲ್ಕೆ ಕ್ರಾಸ್ ಬಳಿ ಎದುರಿನಿಂದ ಅಜೆಕಾರು ಕಡೆಗೆ ಅತಿವೇಗವಾಗಿ ಬರುತ್ತಿದ್ದ ಕ್ರೇನ್ ರಸ್ತೆ ಬಲಬದಿಗೆ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲೋಕೇಶ್ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಅಪಘಾತದ ಬಳಿಕ ಕ್ರೇನ್ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇದೇ ರಸ್ತೆಯಲ್ಲಿ ಬಂದ ಲೋಕೇಶ್ ಅವರ ಪರಿಚಯಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!