ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕುವವರಿಗೆ ಇಂದೇ ಎಚ್ಚರಿಕೆ ನೀಡುವ ಕೆಲಸ ಮಾಡಿ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅಂತಹವರಿಗೆ ಜೈಲೂಟ ಮಾಡಿಸದಿದ್ದರೆ ನಾವು ಬಿಜೆಪಿ ಕಾರ್ಯಕರ್ತರೇ ಅಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗುಡುಗಿದ್ದಾರೆ.

ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಬೈಲೂರಿನಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ ಅವರು ಮಾತನಾಡಿದರು.
ಈ ದೇಶದ ಮಾನ-ಮರ್ಯಾದೆಯನ್ನು ಹಾಳು ಮಾಡಿರುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದ ಅವರು, ರಾಹುಲ್ ಗಾಂಧಿ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವಕ್ಕೆ ಧಕ್ಕೆ ತರುತ್ತಿದ್ದರೆ, ಮುನಿಯಾಲು ಉದಯಕುಮಾರ್ ಶೆಟ್ಟಿ ಕಾರ್ಕಳದ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.



