ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಬೈಂದೂರು ತಾಲೂಕಿನ ಶಿರೂರಿನ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಉಪ್ಪುಂದ ಜನತಾ ಕಾಲೊನಿಯ ಅಭಿಷೇಕ ಖಾರ್ವಿ ಮತ್ತು ಪ್ರವೀಣ ಖಾರ್ವಿ ಎಂದು ಗುರುತಿಸಲಾಗಿದೆ.

ಉಪ್ಪುಂದದ ಕೊಡಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿದ್ದ ಇಬ್ಬರು ಯುವಕರ ದುರಂತ ಸಾವು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ಪ್ರವೀಣ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರೆ, ಅಭಿಷೇಕ ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಇಬ್ಬರೂ ಬಡ ಕುಟುಂಬದವರಾಗಿದ್ದು, ಯುವಕರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಸೋಮವಾರ ರಾತ್ರಿ ಇಬ್ಬರೂ ಉಪ್ಪುಂದದಿಂದ ಶಿರೂರು ಟೋಲ್‌ಗೇಟ್ ಕಡೆಗೆ ತೆರಳುತ್ತಿದ್ದ ವೇಳೆ ಶಿರೂರಿನ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರ ತಲೆಗೂ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಕುರಿತು ಬೈಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

error: Content is protected !!