ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು ಬಿಸಿಯೂಟ ನೌಕರರು ಉಳ್ಳಾಲ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳು ಕ್ರಮಬದ್ಧವಾಗಿ ವೇತನ ಪಾವತಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಎಐಟಿಯುಸಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಒಂದಾದ ಬಿಸಿಯೂಟ ಕಾರ್ಯಕ್ರಮದಲ್ಲಿ ಕಳೆದ ಹಲವು ವರ್ಷಗಳಿಂದ ಸಾವಿರಾರು ನೌಕರರು ದುಡಿಯುತ್ತಿದ್ದಾರೆ. ಆದರೆ, ಅವರ ಸೇವೆಗೆ ತಕ್ಕ ಗೌರವ ಮತ್ತು ಸೌಲಭ್ಯಗಳನ್ನು ನೀಡದೆ ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಗೌರವಧನದ ಹೆಸರಿನಲ್ಲಿ ನೌಕರರಿಗೆ ಅಗೌರವ ಹಾಗೂ ಅಮಾನವೀಯತೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರದರ್ಶಿಸುತ್ತಿವೆ. ವರ್ಷಗಳಿಂದ ಮಕ್ಕಳಿಗೆ ಬಿಸಿಯೂಟ ತಯಾರಿಸಿ ನೀಡುವ ಮಹತ್ವದ ಕೆಲಸ ಮಾಡುತ್ತಿರುವ ನೌಕರರ ಸಮಸ್ಯೆಗಳಿಗೆ ಸರ್ಕಾರಗಳು ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ಕೈಬಿಟ್ಟು, ಬಿಸಿಯೂಟ ತಯಾರಿಕೆ ಮತ್ತು ವಿತರಣೆಯ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸಬೇಕು. ಜೊತೆಗೆ ವೇತನವನ್ನು ಪ್ರತಿತಿಂಗಳು ಸಕಾಲದಲ್ಲಿ ಪಾವತಿಸುವ ಮೂಲಕ ನೌಕರರ ಬದುಕಿಗೆ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Leave a Reply

Your email address will not be published. Required fields are marked *

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

error: Content is protected !!