ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಉಪ್ಪಿನಂಗಡಿ ಬಳಿ ನೂತನ ಟೋಲ್‌ಗೇಟ್ ಆರಂಭಿಸಿರುವುದನ್ನು ವಿರೋಧಿಸಿ ಎಸ್‌ಡಿಪಿಐ ಕಾರ್ಯಕರ್ತರು ಗುರುವಾರ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್‌ಗೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ವೇಳೆ ಪ್ರತಿಭಟನಾಕಾರರು ಟೋಲ್ ಸಂಗ್ರಹಕ್ಕೆ ಅಡ್ಡಿಪಡಿಸಿ, ವಾಹನಗಳು ಶುಲ್ಕ ಪಾವತಿಸದೆ ತೆರಳಲು ಅವಕಾಶ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ, ಟೋಲ್‌ಗೇಟ್‌ನ ಕ್ಯಾಮೆರಾಗಳಿಗೆ ಹಾನಿ ಮಾಡಿರುವುದು, ಸಿಬ್ಬಂದಿಗೆ ಬೆದರಿಕೆ ಹಾಕಿರುವುದು ಹಾಗೂ ಬೂಮ್ ಬ್ಯಾರಿಯರ್‌ಗಳನ್ನು ಕಿತ್ತುಹಾಕಿರುವ ಆರೋಪವೂ ಕೇಳಿಬಂದಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಬಂಟ್ವಾಳ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಳಿಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

error: Content is protected !!