ಜನ ಮನದ ನಾಡಿ ಮಿಡಿತ

Advertisement

ಬಂಟರ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ದಿನ ಸ್ವಸ್ಥ ಸಮಾಜ ನಿರ್ಮಾಣದ ಪರಿಕಲ್ಪನೆ ಅವಶ್ಯ: ಆಳ್ವ


ಮೂಡುಬಿದಿರೆ: ಮಾನವ ಬದುಕಿನುದ್ದಕ್ಕೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ
ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ .ಮೋಹನ ಆಳ್ವ ಹೇಳಿದರು ಮೂಡುಬಿದಿರೆಯ ಬಂಟರ ಸಂಘದ ಮಹಿಳಾ ಘಟಕದ ವತಿಯಿಂದ ಭಾನುವಾರ ಪಟ್ಟಣದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲ ಜಾತಿ ಸೇರಿದರೆ ಸಮಾಜ. ಮನುಷ್ಯ ದಾನ ಧರ್ಮದ ಮೂಲಕ ಸ್ವಸ್ಥ ಸಮಾಜ ನಿರ್ಮಿಸುವ ಪರಿಕಲ್ಪನೆ ಹೊಂದಿರಬೇಕು. ಬಡವ- ಶ್ರೀಮಂತ ಎನ್ನುವ ಅಂತರ ಕಡಿಮೆಗೊಳಿಸುವುದರತ್ತ ಪ್ರತಿಯೊಬ್ಬರೂ ಚಿತ್ತ ಹರಿಸಬೇಕು ಎಂದು ಸಲಹೆ ನೀಡಿದರು. ಇಂದು ಯುವ ಪೀಳಿಗೆ ಮೊಬೈಲ್ ಗೆ ಜೋತು ಬಿದ್ದು ಸಮಾಜಮುಖಿ ಜೀವನದಿಂದ ಪ್ರತ್ಯೇಕವಾಗಿದ್ದಾರೆ ಕೂಡುಕಟುಂಬದ ಮೂಲಕ ಸಂಸ್ಕಾರ ಪರಿಚಯಿಸಬೇಕಾಗಿದೆ. ಆಗ ಮಾತ್ರ ವ್ಯಕ್ತಿ ಉತ್ತಮ ಪ್ರಜೆಯಾಗಲು ಸಾಧ್ಯ ಎಂದರು.


ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಸುಧಾರಾಣಿ ಉಪನ್ಯಾಸ ನೀಡಿ, ಬದಲಾದ ಕಾಲಘಟ್ಟದಲ್ಲಿ ಆಟಿಡೊಂಜಿ ದಿನ ಅನೇಕ ಬಗೆಯಲ್ಲಿ ರೂಪಾಂತರಗೊಂಡಿದೆ. ಈ ಹಿಂದೆ ಆ಼಼ಷಾಡ ಮಾಸದಲ್ಲಿ ತುಳುವರು ಅನುಸರಿಸುತ್ತಿದ್ದ ಸಂಪ್ರದಾಯ ಹಾಗೂ ಆಚರಣೆಯನ್ನು ಯುವ ಪೀಳಿಗೆಗೆ ನೆನಪಿಸುವ ಕಾರ್ಯಕ್ರಮ ಇದಾಗಿದೆ ಎಂದರು. ಮೂಡುಬಿದಿರೆ ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಮೂಡುಬಿದಿರೆ ಬಂಟರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್ . ಹೆಗ್ಡೆ, ಮಂಗಳೂರಿನ ಬಂಟರ ಮಾತೃ ಸಂಘದ ಕಾರ್ಯಾಕಾರಿ ಸದಸ್ಯೆ ಸಬಿತಾ ಶೆಟ್ಟಿ , ಮೂಡುಬಿದಿರೆ ಬಂಟರ ಸಂಘದ ಗೌರವ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಕಾರ್ಯದರ್ಶಿ ಮೇಘನಾಥ ಶೆಟ್ಟಿ, ಕೋಶಾಧಿಕಾರಿ ಎಂ. ಪುರುಷೋತ್ತಮ ಶೆಟ್ಟಿ, ಮೂಡುಬಿದಿರೆಯ ಯುವ ಬಂಟರ ಸಂಘದ ಅಧ್ಯಕ್ಷ ಜಯಕುಮಾರ್ ಶೆಟ್ಟಿ ಇದ್ದರು.

ಪ್ರಾಪ್ತಿ ಆರ್ ಶೆಟ್ಟಿ ಪ್ರಾರ್ಥಿಸಿ, ಪ್ರಫುಲ್ಲಾ ಶೆಟ್ಟಿ ಸ್ವಾಗತಿಸಿದರು. ರಂಜಿತಾ ಶೆಟ್ಟಿ, ಶಿವ ಪ್ರಸಾದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಅನಿತಾ ಶೆಟ್ಟಿ, ಪದ್ಮಾವತಿ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು ಬಾಕ್ಸ್ ತುಳುನಾಡಿನ ‘ಚೆನ್ನ ಮಣೆ’ ಜಾನಪದ ಆಟದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮದಲ್ಲಿ ಜಾನಪದ ಹಾಡುಗಳು ಮತ್ತು ನೃತ್ಯಗಳು ಆಕರ್ಷಣೆಯಾಗಿದ್ದವು.  ತುಳುನಾಡಿನ ವಿವಿಧ ನಮೂನೆ ಖಾದ್ಯಗಳು ಗಮನ ಸೆಳೆಯಿತು. ಬಾಕ್ಸ್ ಸಾಧಕರಿಗೆ ಸನ್ಮಾನ ಹೈನುಗಾರಿಕೆಯಲ್ಲಿ ಸಾಧನೆ ಮಾಡಿದ ನಳಿನಾಕ್ಷಿ, ಪಾಡ್ಡನದಲ್ಲಿ ಸಾಧನೆಗಾಗಿ ಕುಸುಮಾ, ನಾಟಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸುನಂದಾ ಶೆಟ್ಟಿ, ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಮೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಬಂಟರ ಸಮುದಾಯ ಅಶಕ್ತರಿಗೆ ಸಹಾಯ ಧನ ನೀಡಲಾಯಿತು. ಘಟಕದ ಸದಸ್ಯರ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!