ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ 12ನೇ ವರ್ಷದ ಸ್ಥಾಪಕರ ದಿನಾಚರಣೆ ಅಂಗವಾಗಿ ಅಗಸ್ಟ್ 14 ರಂದು “ಶೀಂಟೂರು ಸ್ಕೃತಿ – 2023” ಕಾರ್ಯಕ್ರಮ ಆಯೋಜನೆ

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ 12ನೇ ವರ್ಷದ ಸ್ಥಾಪಕರ ದಿನಾಚರಣೆ ‘ಶೀಂಟೂರು ಸ್ಮೃತಿ-2023” ಕಾರ್ಯಕ್ರಮವು ಇದೇ ಬರುವ ಅಗಸ್ಟ್ 14 ರಂದು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈ ಹೇಳಿದ್ದಾರೆ.


ಇವರು ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ, ಸೇನಾನಿ, ಶಿಕ್ಷಕರೂ ಆಗಿದ್ದ ದಿ.ಶೀಂಟೂರು ಆದರ್ಶ ಕೃಷಿಕರೂ ಆಗಿದ್ದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಎಂಬುವುದು ಅವರು ಕಂಡಿದ್ದ ಕನಸ್ಸಾಗಿತ್ತು. ಈ ನಿಟ್ಟಿನಲ್ಲಿ ಅವರ ಸ್ಮೃತಿಯನ್ನು ಪ್ರತೀ ವರ್ಷ ಆಚರಣೆ ಮಾಡಲಾಗುತ್ತಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದು, ಭಾರತೀಯ ನೌಕಾದಳದ ನಿವೃತ್ತ ಸೇನಾಧಿಕಾರಿ ವಿಕ್ರಂ ದತ್ತಾ ಅವರನ್ನು ಮುಂಬಯಿ ಹೇರಂಭ ಇಂಡಸ್ಟ್ರೀಸ್ ಅಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಸನ್ಮಾನಿಸಲಿದ್ದಾರೆ.


ಮಂಗಳೂರು ಕಾಲೇಜ್ ಆಫ್ ಫಿಷರೀಸ್ ನ ನಿವೃತ್ತ ಡೈರೆಕ್ಟರ್ ಆಫ್ ಇನ್‌ಸ್ಟ್ರಕ್ಷನ್ ಪ್ರೊ.ಡಾ.ಡಿ.ಎಸ್.ಶೇಷಪ್ಪ ಶೀಂಟೂರು ಸ್ಮರಣೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗುಜರಾತ್ ಗ್ರೀನ್ ಹೀರೋ ಆಪ್ ಇಂಡಿಯಾದ ಸಹಸಂಸ್ಥಾಪಕ ಡಾ.ಆರ್.ಕೆ.ನಾಯರ್, ದುಬೈ ಉದ್ಯಮಿ ಅಶ್ರಫ್ ಶಾ ಮಾಂತೂರು ದುಬೈ , ಸವಣೂರು ಎಸ್ ಎನ್ ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ವಿಶ್ವಸ್ಥ ಎನ್.ಸುಂದರ ರೈ ಸವಣೂರು, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.
ಇನ್ನೂ ಸ್ಮೃತಿ ಕಾರ್ಯಕ್ರಮದ ಅಂಗವಾಗಿ ವಿದ್ಯಾರಶ್ಮಿ ವಿದ್ಯಾಲಯದ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಪ್ರತಿಭಾನ್ವಿತ 10 ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂ. ಶೀಂಟೂರು ಶಿಷ್ಯ ವೇತನ ವಿತರಿಸಲಾಗುವುದು ಎಂದು ಹೇಳಿದರು.

ಇನ್ನೂ ಸುದ್ದಿಗೋಷ್ಠಿಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ಸವಣೂರು ಎಸ್ ಎನ್ ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಟ್ರಸ್ಟಿ ಎನ್.ಸುಂದರ ರೈ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ, ಸವರ್ಣೂ ಪ್ರಥಮದರ್ಜೆ ಕಾಲೇಜು ಉಪಪ್ರಾಂಶುಪಾಲ ಎಂ.ಶೇಷಗಿರಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!