ಜನ ಮನದ ನಾಡಿ ಮಿಡಿತ

Advertisement

ಕರಾವಳಿಯ ವಾಣಿಜ್ಯ ಬೆಳೆಯಾದ ಅಡಿಕೆ ಬೆಳೆಗಾರನಿಗೆ ಆರ್ಥಿಕ ಸಂಕಷ್ಟ

 ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವಾಲಯ ಭೂತಾನ್‌ನಿಂದ ಅಡಿಕೆ ಆಮದಿಗೆ ಒಪ್ಪಿಗೆ ನೀಡಿದೆ. ಅಲ್ಲದೆ ಅಡಿಕೆಗೆ  ನಿಗದಿಯಾಗಿದ್ದ ಕನಿಷ್ಠ ಆಮದು ಬೆಲೆಯನ್ನ ಇಲ್ಲವಾಗಿಸಿದ್ದು ರೈತರ ಆತಂಕಕ್ಕೆ ಕಾರಣವಾಗಿದೆ.  

  ದೇಶೀ ಅಡಿಕೆಗೆ ಮನ್ನಣೆ ಸಿಗಬೇಕೆಂಬ ದೃಷ್ಟಿಯಲ್ಲಿ ವಿದೇಶದಿಂದ ಭಾರತಕ್ಕೆ ಆಮದಾಗುವ ಅಡಿಕೆಗೆ  ಕನಿಷ್ಠ ಆಮದು ಬೆಲೆ ನಿಗದಿಪಡಿಸಲಾಗಿತ್ತು. ಆದರೆ, ಈ ನಿಯಮ ಉಲ್ಲಂಘಿಸಿ ಭೂತಾನ್‌ನಿಂದ ಆಮದು ಬೆಲೆ ವಿಧಿಸದೆ ಅಡಿಕೆ ಆಮದಿಗೆ ಒಪ್ಪಿಗೆ ನೀಡಿರುವುದು ಪ್ರಸ್ತುತ ಸಂಕಷ್ಟಕ್ಕೆ ಕಾರಣ . ಇದು ಹಲವು ಅಡ್ಡ ಪರಿಣಾಮ ಸೃಷ್ಟಿಸುವ ಭೀತಿ ಉಂಟಾಗಿದೆ. ಈ ಹಿಂದೆ ಇತರ ರಾಷ್ಟ್ರಗಳಿಂದ  ಇದೇ ರೀತಿ ಆಮದು ಮಾಡಿ   ಅಡಿಕೆ ಮಾರುಕಟ್ಟೆಯಲ್ಲಿ ದೇಶೀಯ ಅಡಿಕೆ ಧಾರಣೆ ಪಾತಾಳಕ್ಕೆ ಕುಸಿದಿತ್ತು. ಅಂತಹ ಸ್ಥಿತಿ ಮತ್ತೊಮ್ಮೆ ಉಂಟಾಗುವ ಆತಂಕ ರೈತರದ್ದಾಗಿದೆ.

     ಕೂಡಲೇ ಈ ಆದೇಶವನ್ನು ಹಿಂಪಡೆದು ಬೆಳೆಗಾರರ ಹಿತ ಕಾಪಾಡಬೇಕು ಎಂಬ ಆಗ್ರಹಗಳು ಕೇಳಿಬಂದಿವೆ. ಜೊತೆಗೆ ಇದನ್ನೇ ನೆಪವಾಗಿಟ್ಟುಕೊಂಡು ಮಧ್ಯವರ್ತಿಗಳು ಬೆಲೆ ಕಡಿಮೆ ಮಾಡಲು ಯತ್ನಿಸುತ್ತಾರೆ. ಸರ್ಕಾರ ಮತ್ತು ಅಧಿಕಾರಿಗಳಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ಅನ್ಯಾಯ ತಡೆಯಲಿ. ಷರತ್ತು ವಿಧಿಸಿ ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳಲಿ ಎಂಬುದು ರೈತರ ಬೇಡಿಕೆಯಾಗಿದೆ.

     ರಾಜ್ಯದಲ್ಲಿ ಒಟ್ಟಾರೆ 4.20 ಲಕ್ಷ ಹೆಕ್ಟೇರ್ ಅಡಿಕೆ ಪ್ರದೇಶವಿದೆ. ದೇಶದ ಅಡಿಕೆ ಉತ್ಪಾದನೆಯ ಶೇ.35ಕ್ಕೂ ಹೆಚ್ಚು ಅಡಿಕೆಯನ್ನು ಕರ್ನಾಟಕ ರಾಜ್ಯದಿಂದಲೇ ಉತ್ಪಾದಿಸಲಾಗುತ್ತಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಅಡಿಕೆ ಉತ್ಪಾದನೆಯು ಶೇ.30 ರಷ್ಟು ಹೆಚ್ಚಿದೆ’ ಎಂದು ಮಾರುಕಟ್ಟೆ ತಜ್ಞರು ಮಾಹಿತಿ ನೀಡಿದ್ದಾರೆ

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!