ಜನ ಮನದ ನಾಡಿ ಮಿಡಿತ

Advertisement

ರೈಲಿನಲ್ಲಿ ಅಕ್ರಮ ಗಾಂಜಾ ಸಾಗಾಟ-3.16 ಲಕ್ಷ ರೂ. ಮೌಲ್ಯದ ಗಾಂಜಾ ವಶ

ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಅನಾಮಧೇಯ ಬ್ಯಾಗ್ ನಲ್ಲಿ ಪತ್ತೆಯಾದ ಗಾಂಜಾವನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗುರುವಾರ ಬೆಳಗ್ಗೆ ೧೧.೧೫ ರ ಸುಮಾರಿಗೆ ಮಂಗಳೂರು ರೈಲ್ವೇ ನಿಲ್ದಾಣದ ಎರಡನೇ ಫ್ಲ್ಯಾಟ್‌ ಫಾರಂನಲ್ಲಿ ನಿಲುಗಡೆಗೊಂಡಿದ್ದ ಕಾರವಾರ-ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ 3,16,650 ರೂಪಾಯಿ ಮೌಲ್ಯದ 6.333 ಕೇಜಿ ತೂಕದ ಒಣ ಗಾಂಜಾ ಪತ್ತೆಯಾಗಿತ್ತು. ರೈಲಿನ ನಿತ್ಯ ತಪಾಸಣೆ ವೇಳೆ ಸಿಕ್ಕ ಅನಾಮಧೇಯ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿದೆ. ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ. ಮಂಗಳೂರು ಪೂರ್ವಬಕಾರಿ ವಿಭಾಗದಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಪಾಲ್ಘಾಟ್‌ ವಿಭಾಗದ ಸಿಐಬಿ ಮುಖ್ಯ ನಿರೀಕ್ಷಕ ಎನ್‌. ಕೇಸವದಾಸ್‌, ಮಂಗಳೂರು ಜಂಕ್ಷನ್‌ ಇನ್‌ಸ್ಪೆಕ್ಟರ್‌ ಮನೋಜ್‌ ಕುಮಾರ್‌ ಯಾದವ್‌, ಸಿಐಬಿ ಎಸ್‌ಐ ದೀಪಕ್‌ ಎ.ಪಿ., ಅಜಿತ್‌ ಅಶೋಕ್‌ ಎ.ಪಿ, ಎಎಸ್‌ಐ ಸಾಜು ಕೆ., ಎಸ್‌.ಎಂ. ರವಿ., ಮಂಗಳೂರು ಜಂಕ್ಷನ್‌ ಎಎಸ್‌ಐ ಕೆ. ಶಶಿ, ಸಿಐಬಿ ಹೆಡ್‌ ಕಾನ್‌ಸ್ಟೆಬಲ್‌ ಎನ್‌. ಅಶೋಕ್‌, ಅಜೀಶ್‌ ಒ.ಕೆ., ಜಂಕ್ಷನ್‌ ಕಾನ್‌ಸ್ಟೆಬಲ್‌ ಟಿ.ಪಾಂಡುರಂಗ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!