ಜಾಗತಿಕ ಬಂಟರ ಸಂಘಗಗಳ ಒಕ್ಕೂಟ ಮಂಗಳೂರು ವತಿಯಿಂದ ಅಕ್ಟೋಬರ್ 28, 29 ರಂದು ಉಡುಪಿಯ ಅಜ್ಜರಕಾಡುವಿನಲ್ಲಿ ವಿಶ್ವ ಬಂಟರ ಸಮ್ಮಿಲನ, ಕ್ರೀಡಾಕೂಟ ಹಾಗು ಹಾಗೂ ವಿಶ್ವ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.

ಈ ಬಗ್ಗೆ ಉಡುಪಿಯ ಅಂಬಾಗಿಲು ಅಮೃತ ಗಾರ್ಡನ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಗಳನ್ನ ನಡೆಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಜಗತ್ತಿನಾದ್ಯಂತ ಇರುವ ನೂರೈವತ್ತು ಬಂಟರ ಸಂಘಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮುಂಬೈ, ಬೆಂಗಳೂರು, UAE ಸೇರಿದಂತೆ ವಿವಿಧ ಕಡೆಗಳಿಂದ ಸುಮಾರು ಹತ್ತರಿಂದ ಹದಿನೈದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಕ್ರೀಡಾ ಸಂಗಮದಲ್ಲಿ ತ್ರೋಬಾಲ್, ಕಬಡ್ಡಿ. ವಾಲೀಬಾಲ್ ಮತ್ತು ಹಗ್ಗಜಗ್ಗಾಟವನ್ನ ಏರ್ಪಡಿಸಲಾಗುತ್ತಿದೆ. ಅದೇ ರೀತಿ ಸಾಂಸ್ಕೃತಿಕ ಸಂಭ್ರಮದಲ್ಲಿ ತಂಡಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ದೆಗಳನ್ನ ಏರ್ಪಡಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಸಮುದಾಯದ ಹಲವು ದಾನಿಗಳು ಸಂಪೂರ್ಣ ನೆರವು ನೀಡಲಿದ್ದಾರೆ ಎಂದು ಹೇಳಿದ ಅವರು ಕಾರ್ಯಕ್ರಮದ ಪೂರ್ಣ ಮಾಹಿತಿ ನೀಡಿದರು.

ಈ ಸಂದರ್ಭ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಉಡುಪಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಸಾಂಸ್ಕೃತಿಕ ಸಂಭ್ರಮದ ಸಂಚಾಲಕ ಚಂದ್ರಹಾಸ ಶೆಟ್ಟಿ, ಕ್ರೀಡಾ ಸಂಗಮ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಲಾರ್, ಹೆಬ್ರಿ ಬಂಟರ ಸಂಘದ ಅಧ್ಯಕ್ಷ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





