ಜನ ಮನದ ನಾಡಿ ಮಿಡಿತ

Advertisement

ಮುಂಗುಸಿಯ ಪ್ರಾಣ ಉಳಿಸಲು ಹೋಗಿ ರಿಕ್ಷಾ ಪಲ್ಟಿ; ಚಾಲಕನಿಗೆ ಗಾಯ

ವಿಟ್ಲ: ರಸ್ತೆಗೆ ಅಡ್ಡ ಬಂದ ಮುಂಗುಸಿಯನ್ನೂ ಉಳಿಸಲು ಹೋಗಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಆಟೋ ಚಾಲಕ ಮಂಗಲಪದವು ನಿವಾಸಿ ಇಸ್ಮಾಯಿಲ್ (53) ಗಾಯಗೊಂಡಿದ್ದಾರೆ.

ಇಂದು ಬೆಳಗ್ಗೆ ವಿಟ್ಲದಿಂದ ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಮತ್ತೆ ವಿಟ್ಲಕ್ಕೆ ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸಮೀಪ ಮುಂಗುಸಿಯೊಂದು ಅಡ್ಡಬಂದಿದೆ. ವೇಗವಾಗಿ ಚಲಿಸುತ್ತಿದ್ದ ರಿಕ್ಷಾ ಚಾಲಕ ಮುಂಗುಸಿಯ ಪ್ರಾಣ ಉಳಿಸಲು ಹಠಾತ್ ಬ್ರೇಕ್ ಹಾಕಿದ್ದಾರೆ. ತಕ್ಷಣ ನಿಯಂತ್ರಣ ತಪ್ಪಿದ ಆಟೋ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಅಪ್ಪಳಿಸಿದೆ.

ಘಟನೆಯಲ್ಲಿ ಚಾಲಕ ಇಸ್ಮಾಯಿಲ್ ಗಾಯಗೊಂಡಿದ್ದು, ಆಟೋ ಮುಂಭಾಗ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!