ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಬಾಡಿಗೆ ಮನೆ ವಿಚಾರಕ್ಕೆ ಗಲಾಟೆ – ಟಾರ್ಗೆಟ್‌ ತಂಡದ ನಟೋರಿಯಸ್ ಆರೋಪಿ ಕೊಲೆಗೆ ಯತ್ನ..!

ನಟೋರಿಯಸ್ ಆರೋಪಿ, ಟಾರ್ಗೆಟ್ ತಂಡಕ್ಕೆ ಸೇರಿದ ಉಳ್ಳಾಲ ಕೋಟೆಪುರ ನಿವಾಸಿ ನಮೀರ್ ಹಂಝ ಎಂಬಾತ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿ ಕತ್ತಿಯಿಂದ ಕಡಿದು ನೆತ್ತಿಲ ಪದವು ನಿವಾಸಿ ಮನ್ಸೂರ್‌(40) ಎಂಬಾತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ಆ.13ರಂದು ತಡರಾತ್ರಿ ನಡೆದಿದೆ.

ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆಗೆಂದು ನೆತ್ತಿಲಪದವು ಬಳಿಯಿರುವ ಮನ್ಸೂರ್ ಸಂಬಂಧಿಕರಿಗೆ ಸೇರಿದ ಮನೆಗೆ ಬಂದಿದ್ದರು. ಆದರೆ ಮನ್ಸೂರ್ ಇದನ್ನು ತಡೆದು, ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಮನೆಯವರಿಗೆ ತಿಳಿಸಿದ್ದರು. ಇದರಿಂದ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನಚಕಮಕಿ ನಡೆದು, ಪರಸ್ಪರ ಹೊಡೆದಾಟಕ್ಕೂ ಕಾರಣವಾಯಿತು. ಇದೇ ದ್ವೇಷದಲ್ಲಿ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಕೃತ್ಯ ಬಳಿಕ ಆರೋಪಿ ತಲೆಮರೆಸಿದ್ದಾನೆ.

ಉಳ್ಳಾಲದಲ್ಲಿ ಹನಿಟ್ರ್ಯಾಪ್, ಮುಕ್ಕಚ್ಚೇರಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸಹಿತ ವಿವಿಧ ಕೊಲೆ ಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿತ್ತು. ಇಲ್ಯಾಸ್ ಕೊಲೆ ನಂತರ ತಂಡದ ಕೃತ್ಯಗಳು ಕಡಿಮೆಯಾಗಿತ್ತು. ಇದೇ ತಂಡದಲ್ಲಿದ್ದುಕೊಂಡ ಹಂಝ ಕೂಡಾ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎನ್ನಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!