ಜನ ಮನದ ನಾಡಿ ಮಿಡಿತ

Advertisement

ಹಣ ಸಂಪಾದಿಸುವ ಜೊತೆಗೆ ಸಮಾಜಕ್ಕೆ ನೆರವು ಆಗಬೇಕು ; ಶಾಸಕ ಅಶೋಕ್ ರೈ

ಹಣ ಸಂಪಾದನೆಯ ಜತೆಗೆ ಸಮಾಜಕ್ಕೆ ಕೊಡುಗೆಯನ್ನು ನೀಡಬೇಕು. ಆಗ ಮಾತ್ರ ವ್ಯಕ್ತಿಗೆ ಗೌರವ ದೊರೆಯಲು ಸಾಧ್ಯ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.


ಇವರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ನಡೆದ ನಿವೃತ್ತ ಸೇನಾನಿ, ಶಿಕ್ಷಕ ದಿ| ಶೀಂಟೂರು ನಾರಾಯಣ ರೈ ಅವರ ಸ್ಮರಣೆ ʼಶೀಂಟೂರು ಸ್ಮೃತಿʼ-2023 ಕಾರ್ಯಕ್ರಮದಲ್ಲಿ ಭಾಗಿಯಾಗಿ, ಸವಣೂರು ಸೀತಾರಾಮ ರೈ ಅವರು ಸುಮಾರು 25 ಕೋ.ರೂ.ಗಳನ್ನು ಸವಣೂರಿನ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಕಾರ್ಯಕ್ಕಾಗಿ ವಿನಿಯೋಗಿಸಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯ. ಸವಣೂರಿನ ಸಮಗ್ರ ಅಭಿವೃದ್ಧಿಯ ರೂವಾರಿಯಾಗಿರುವ ರೈಗಳು “ಸವಣೂರಿನ ಶಿಲ್ಪಿ’ಯಾಗಿದ್ದಾರೆ ಎಂದರು.


ಪ್ರೊ| ಡಾ| ಡಿ.ಎಸ್. ಶೇಷಪ್ಪ ಅವರು ಶೀಂಟೂರು ನಾರಾಯಣ ರೈಯವರ ಸಂಸ್ಮರಣೆ ಮಾಡಿದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ದುಬೈಯ ಉದ್ಯಮಿ ಆಶ್ರಫ್ ಶಾ ಮಾಂತೂರು ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈಯವರು ಶೀಂಟೂರು ನಾರಾಯಣ ರೈಗಳ ಪ್ರತಿಮೆಗೆ ಪುಷ್ಪಹಾರವನ್ನು ಸಮರ್ಪಿಸಿದ್ದಾರೆ.
ಬಳಿಕ ವಿದ್ಯಾರಶ್ಮಿ ವಿದ್ಯಾಲಯಕ್ಕೆ ಆಗಮಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಸೀತಾರಾಮ ರೈಗಳು ಸಮ್ಮಾನಿಸಿದರು.


ಸದಾಶಿವ ಶೆಟ್ಟಿಯವರು ಮಾತನಾಡಿ, ಸವಣೂರು ಸೀತಾರಾಮ ರೈಯವರು ಪ್ರಕೃತಿಯ ಸೌಂದರ್ಯ ತಾಣವಾಗಿರುವ ಈ ಗ್ರಾಮೀಣ ಭಾಗದಲ್ಲಿ ಬಹುದೊಡ್ಡ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ ಎಂದು ಹೇಳಿದರು.

ಸಮ್ಮಾನ ಸ್ವೀಕರಿಸಿದ ವಿಕ್ರಂ ದತ್ತ ಮಾತನಾಡಿ, ಸವಣೂರು ಭಾಗದಲ್ಲಿ ಶಿಕ್ಷಣ ಕ್ರಾಂತಿಯ ಜತೆಗೆ ಧಾರ್ಮಿಕ, ಸಾಮಾಜಿಕ ಹಾಗೂ ಉದ್ಯಮ ಕ್ಷೇತ್ರಗಳಲ್ಲೂ ಸೀತಾರಾಮ ರೈಗಳು ಸಾಧನೆ ಮಾಡಿದ್ದಾರೆ. ಅವರ ತಂದೆ ಶೀಂಟೂರು ನಾರಾಯಣ ರೈಗಳ ಶಿಸ್ತು, ಸಮಯಪಾಲನೆ ಹಾಗೂ ಬದುಕು ಎಲ್ಲವೂ ಮಾದರಿ ಎಂದರು.

ಇನ್ನೂ ಈ ಕಾರ್ಯಕ್ರಮದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಎಸ್‌ಎನ್‌ಆರ್ ರೂರಲ್ ಎಜುಕೇಶನ್ ಟ್ರಸ್ಟ್ನ ಟ್ರಸ್ಟಿಗಳಾದ ಸವಣೂರು ಸುಂದರ ರೈ, ರಶ್ಮಿ ಅಶ್ವಿನ್ ಶೆಟ್ಟಿ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ನಾರಾಯಣ ಮೂರ್ತಿ ಕೆ. ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!