ಜನ ಮನದ ನಾಡಿ ಮಿಡಿತ

Advertisement

ಮೂಲ್ಕಿ: ಸ್ವಾತಂತ್ರ್ಯೋತ್ಸವದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಭಾಗಿ

ಮೂಲ್ಕಿ ಗಾಂಧೀ ಮೈದಾನದಲ್ಲಿ ನಡೆದ 77 ನೇ ¸ಸ್ವಾತಂತ್ರ್ಯೋತ್ಸವದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿದ್ದಾರೆ.

ಮುಲ್ಕಿ: ತಾಲ್ಲೂಕಿನಲ್ಲಿ ಎಲ್ಲಾ ಕಚೇರಿಗಳು ಒಂದೇ ಸೂರಿನಲ್ಲಿ ಬರುವಂತೆ ಆಡಳಿತ ಸೌಧ ನಿರ್ಮಾಣ ಕಾರ್ಯ ನಡೆಯುತ್ತಿದ್ದು ಶೀಘ್ರ ಲೋಕಾರ್ಪಣೆ ಮಾಡಲಾಗುವುದು. ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡುವುದರ ಜೊತೆಗೆ ಕುಡಿಯುವ ನೀರಿನ ಬವಣೆ ನೀಗಿಸಲು 46 ಕೋಟಿ ಅನುದಾನ ಮೀಸಲಿಟ್ಟಿದ್ದು ಶೀಘ್ರದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಮುಲ್ಕಿ ತಾಲ್ಲೂಕು ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದಲ್ಲಿ ನಡೆದ 77 ಸ್ವಾತಂತ್ರ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅವರು ಮಾತನಾಡಿ ತಾಲ್ಲೂಕಿಗೆ ಬಹು ಕೋಟಿ ವೆಚ್ಚದ ಪ್ರವಾಸಿ ಮಂದಿರ ಕಾಮಗಾರಿ ಚಾಲನೆಯಲ್ಲಿದ್ದು ಶೀಘ್ರವೇ ಅಗ್ನಿಶಾಮಕ ದಳ, ನ್ಯಾಯಾಲಯ, ಮತ್ತಿತರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.
ಧ್ವಜಾರೋಹಣವನ್ನು ತಾಲ್ಲೂಕು ತಹಶಿಲ್ದಾರ್ ಪ್ರದೀಪ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮುಲ್ಕಿ ನ.ಪಂ ಮುಖ್ಯಾಧಿಕಾರಿ ಎನ್.ಎಂ. ಮೇಸ್ತ, ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾಧರ್, ನ. ಪಂ.ಸದಸ್ಯರು, ಸರಕಾರಿ ಕಾಲೇಜಿನ ಪ್ರಾಂಶುಪಾಲ ಡಾ.ವಾಸದೇವ ಬೆಳ್ಳೆ, ಗೃಹರಕ್ಷಕ ದಳದ ಮಾಜೀ ಕಮಾಂಡರ್ ಮನ್ಸೂರ್ ಹಳೆಯಂಗಡಿ, ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಲ್ಕಿ ಎಸ್ ಐ ಮಾರುತಿ ನೇತೃತ್ವದಲ್ಲಿ ಗೃಹರಕ್ಷಕ ದಳ ಹಾಗೂ ತಾಲೂಕಿನ ವಿವಿಧ ಶಾಲೆಯ ಎನ್‌ಸಿಸಿ, ವಿದ್ಯಾರ್ಥಿಗಳಿಂದ, ಪಥ ಸಂಚಲನೆ ನಡೆಯಿತು. ನ್ಯಾಯವಾದಿ ಭಾಸ್ಕರ ಹೆಗ್ಡೆ ನಿರೂಪಿಸಿದರು
ಕಾರ್ಯಕ್ರಮದಲ್ಲಿ ತಾಲ್ಲೂಕು ವ್ಯಾಪ್ತಿಯ ಎಸ್ ಎಸ್ ಎಲ್ ಸಿ ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!