ಜನ ಮನದ ನಾಡಿ ಮಿಡಿತ

Advertisement

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರ ಕೈಯಲ್ಲಿ ‘ದೊಣ್ಣೆ ಕಡ್ಡಾಯ’

ತಿರುಪತಿಗೆ ಜೀವನದಲ್ಲಿ ಒಮ್ಮೆಯಾದರೂ ಹೋಗಬೇಕು ಎನ್ನುವ ಬಯಕೆ ಹಿಂದೂ ಸನಾತನ ಧರ್ಮದ ಜನರಲ್ಲಿ ಇರುವುದು ಸಹಜ.
ಆದರೆ ಪ್ರಸ್ತುತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಹೋಗುವವರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗಬೇಕೆಂದು, ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಆದೇಶ ಜಾರಿ ಮಾಡಿದೆ.


ಇತ್ತೀಚೆಗೆ ತಿಮ್ಮಪ್ಪನ ದರ್ಶನ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ಈ ಹಿನ್ನೆಲೆ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮ ವಹಿಸುತ್ತಿದ್ದು, ಭಕ್ತರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗುವಂತೆ ತಿಳಿಸಿದೆ. ಅಲ್ಲದೇ ಪಾದಚಾರಿ ಮಾರ್ಗದಲ್ಲಿ ಹೋಗುವವರರು ಗುಂಪಿನಲ್ಲಿ ಹೋಗಬೇಕು. ಒಂದೊಂದು ಗುಂಪಿಗೂ ಒಬ್ಬ ಸೆಕ್ಯೂರಿಟಿ ಗಾರ್ಡ್‍ನ್ನು ಇರಿಸಲಾಗುತ್ತದೆ ಅಂತ ತಿಳಿಸಿದೆ.
ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಶವಿಲ್ಲ ಎಂದು ಟಿಟಿಡಿ ಹೇಳಿದೆ. 15 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಲಿಪಿರಿ ಮಾರ್ಗದಲ್ಲಿ ಬೆಳಗ್ಗೆ 5ರಿಂದ ರಾತ್ರಿ 10ರವರೆಗೆ ಹಾಗೂ ಶ್ರೀವಾರಿ ಮೆಟ್ಟು ಪ್ರದೇಶದಲ್ಲಿ ಬೆಳಗ್ಗೆ 6 ರಿಂದ ಸಂಜೆ 6ರವೆರೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.

ತಿರುಮಲ ಬೆಟ್ಟವನ್ನು ನಡಿಗೆಯ ಮೂಲಕ ತೆರಳುವ ಭಕ್ತರ ಮತ್ತು ಮಕ್ಕಳ ಕೈಗೆ ಅಲ್ಲಿನ ಪೋಲೀಸ್ ಸಿಬ್ಬಂದಿ ಬ್ಯಾಂಡ್ ಕಟ್ಟುತ್ತಾರೆ. ಮಕ್ಕಳು ಹೆತ್ತವರಿಂದ ನಾಪತ್ತೆಯಾದರೆ ಅವರನ್ನು ಸುಲಭವಾಗಿ ಹುಡುಕಲು ಇದು ಉಪಯುಕ್ತವಾಗಿದೆ. ಇದರೊಂದಿಗೆ ಮಕ್ಕಳ ಕೈಯಲ್ಲಿರುವ ಬ್ಯಾಂಡ್‍ನಲ್ಲಿ ಪೋಷಕರ ವಿವರಗಳನ್ನು ನಮೂದಿಸಲಾಗುತ್ತದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!