ಜನ ಮನದ ನಾಡಿ ಮಿಡಿತ

Advertisement

ಮಂಚಿ ಸರಕಾರಿ ಶಾಲೆಯಲ್ಲಿ ವೀರ ಸಾವರ್ಕರ್ ‘ಜೈ’ ಕಾರ ವಿಚಾರ; ಸಿಡಿದೆದ್ದ ಹಿಂ.ಜಾ.ವೇ..!!


ಬoಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಮಂಚಿ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ‍್ಯ ದಿನದಂದು ಧ್ವಜಾರೋಹಣದ ಸಂದರ್ಭ ಶಾಲಾ ಮಕ್ಕಳೊಂದಿಗೆ ಸರಕಾರಿ ಶಾಲಾ ಶಿಕ್ಷಕಿ ಸ್ವಾತಂತ್ರ್ಯ ಹೋರಾಟಗಾರರಿಗೆ ಘೋಷಣೆ ಹಾಕಿದ್ದಾರೆ .
ಈ ಪೈಕಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರಿಗೂ ಜೈಕಾರ ಹಾಕಿದ್ದಾರೆ. ಇದನ್ನು ಶಾಲಾ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಬಶೀರ್ ಎಂಬಾತ ವಿಡಿಯೋ ಮಾಡಿ, ವೈರಲ್ ಮಾಡಿದ್ದಾನೆ.


ಇದನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿದ ಶಾಲಾ ಮುಸ್ಲಿಂ ಪೋಷಕರು ಕೆಲವು ರಾಜಕಾರಣಿಗಳು, ಶಿಕ್ಷಕಿಗೆ ಒತ್ತಡ ತಂದು, ಶಿಕ್ಷಕಿ ಕ್ಷಮೆಯಾಚಿಸುವಂತೆ ಮಾಡಿದ್ದಾರೆ.
ಈ ಪ್ರಕರಣವನ್ನು ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ವಿಟ್ಲ ತಾಲೂಕು ತೀವ್ರವಾಗಿ ಖಂಡಿಸಿದ್ದು, ಸರಕಾರಿ ಶಾಲೆಯಲ್ಲಿ ಪೋಷಕರ ನೆಪವಾಗಿಟ್ಟುಕೊಂಡು ಸರಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಮತಾಂಧರನ್ನು ಕೂಡಲೇ ಬಂಧಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಹಿಂ.ಜಾ.ವೇ ಎಚ್ಚರಿಕೆಯನ್ನು ನೀಡಿದೆ.

ಇನ್ನೂ ಶಾಲೆಯಲ್ಲಿ ನಡೆದ ಕಾರ್ಯಕ್ರಮ ಚಿತ್ರೀಕರಣ ಮಾಡಿ ವೈರಲ್ ಮಾಡಿರುವುದನ್ನು ಆಕ್ಷೇಪಿಸಿ, ಮುಖ್ಯ ಶಿಕ್ಷಕರು ಬಶೀರ್ ವಿರುದ್ಧ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

error: Content is protected !!