ಜನ ಮನದ ನಾಡಿ ಮಿಡಿತ

Advertisement

ವಿಧಾನಸಭೆ ಚುನಾವಣೆಯ ಪ್ರತಿ ತಿಂಗಳು 1 ಕೋಟಿಗೂ ಹೆಚ್ಚು ಮಹಿಳೆಯರಿಗೆ ಸಿಗಲಿದೆ ₹2 ಸಾವಿರ; ಈ ಲಿಸ್ಟ್ನಲ್ಲಿ ನೀವಿದ್ದೀರಾ?

ವಿಧಾನಸಭೆ ಚುನಾವಣೆಯ ದಿಕ್ಕು ದೆಸೆ ಬದಲಿಸಿದ್ದು, ಕಾಂಗ್ರೆಸ್‌ನ ಗ್ಯಾರಂಟಿಗಳು. ಗ್ಯಾರಂಟಿಗಳ ಉತ್ತರ ಫಲಿತಾಂಶದಲ್ಲೂ ಪ್ರತಿಫಲನ ಆಗಿತ್ತು. ಅದರಲ್ಲೂ ಗೃಹಲಕ್ಷ್ಮಿ ಯೋಜನೆ, ಮಹಿಳೆಯರನ್ನ ಹೆಚ್ಚು ಸೆಳೆದಿತ್ತು. ಸದ್ಯ ಮನೆಯ ಒಡತಿ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಸರ್ಕಾರ ದಿನಾಂಕ ಹಾಗೂ ಸಮಯ ಫಿಕ್ಸ್ ಮಾಡಿದೆ. ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ಕಾರಣಾಂತರಗಳಿoದ ಮೈಸೂರಿನಲ್ಲಿ ನಡೆಯಲಿದ್ದು, ಅದ್ಧೂರಿ ಕಾರ್ಯಕ್ರಮ ನಡೆಸಲು ಸರ್ಕಾರ ತಯಾರಾಗುತ್ತಿದೆ.

ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳಲ್ಲಿ ಒಂದು ಮನೆಯೊಡತಿಗೆ 2 ಸಾವಿರ ಹಣ ನೀಡುವ ಯೋಜನೆ.ಈಗಾಗಲೇ ಗೃಹಲಕ್ಷ್ಮಿಗೆ ನೋಂದಣಿ ಪ್ರಕ್ರಿಯೆ ಬಹುತೇಕ ಮುಗಿಯುತ್ತಾ ಬಂದಿದೆ. ಇದುವರೆಗೆ 1 ಕೋಟಿಗೂ ಅಧಿಕ ಮಹಿಳೆಯರು ಯೋಜನೆಗೆ ನೋಂದಣಿ ಮಾಡಿಸಿದ್ದು, ಪ್ರತಿ ಮನೆ ಒಡತಿಯರು ಧನಲಕ್ಷ್ಮಿ ಸ್ವಾಗತಿಸಲು ಸಜ್ಜಾಗಿದ್ದಾರೆ.ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಂದು ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದ್ದರು. ಬಳಿಕ ಜುಲೈ 20ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿತ್ತು. ಸಣ್ಣಪುಟ್ಟ ಗೊಂದಲಗಳನ್ನು ಬಿಟ್ಟರೆ ನೋಂದಣಿ ಕಾರ್ಯ ಸರಾಗವಾಗಿ ನಡೆದಿದೆ. ಇದುವರೆಗೂ 1.28 ಕೋಟಿಗೂ ಅಧಿಕ ನಾರಿಯರು ಯೋಜನೆಗೆ ನೋಂದಾಯಿಸಿಕೊoಡಿದ್ದಾರೆ. ಆಗಸ್ಟ್ 27ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಿ ವನಿತೆಯರ ಖಾತೆಗೆ 2 ಸಾವಿರ ಜಮೆ ಮಾಡಲು ಯೋಜನೆ ರೂಪಿಸಲಾಗಿತ್ತು. ಆದ್ರೆ ಸರ್ಕಾರ ಕೆಲ ಕಾರಣಗಳಿಂದ ಉದ್ಘಾಟನೆ ದಿನಾಂಕ ಹಾಗೂ ಸಮಯ ಬದಲಿಸಿದೆ. ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಾಹಿತಿ ನೀಡಿದ್ದಾರೆ.

ಆಗಸ್ಟ್ 30ರಂದು ರಾಹುಲ್ ಗಾಂಧಿ ಬೆಂಗಳೂರಿಗೆ ಬರ್ತಿದ್ದಾರೆ. ಅಂದೇ ಮೈಸೂರಿನಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅದೂ ಅಲ್ಲದೇ ಬೇರೆ ಬೇರೆ ಕಾರ್ಯಕ್ರಮಗಳ ನಿಮಿತ್ತ ಉದ್ಘಾಟನೆ ಕಾರ್ಯಕ್ರಮ ಮೈಸೂರಿಗೆ ಶಿಫ್ಟ್ ಆಗಿದೆ ಎಂದಿದ್ದಾರೆ.ಇನ್ನು ಮೈಸೂರಿನಲ್ಲಿ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೈಸೂರು, ಮಂಡ್ಯ, ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರ ಜೊತೆ ಸಭೆ ನಡೆಸಿ ಅದ್ಧೂರಿಯಾಗಿ ಕಾರ್ಯಕ್ರಮ ನಡೆಸುವ ಕುರಿತು ಸಮಾಲೋಚನೆ ನಡೆಸಲಿದ್ದಾರೆ.ಕಳೆದ ವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಗೃಹಲಕ್ಷ್ಮಿ ಯೋಜನೆ ಸಂಬoಧ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಚರ್ಚೆ ನಡೆಸಿದ್ದರು.ಉದ್ಘಾಟನೆ ಕಾರ್ಯಕ್ರಮ ಮೈಸೂರಿಗೆ ಶಿಫ್ಟ್ ಆದ ಕಾರಣ ಅನ್ನಭಾಗ್ಯ ಉದ್ಘಾಟನೆ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯಲಿದೆ ಎನ್ನಲಾಗ್ತಿದೆ. ಒಟ್ಟಿನಲ್ಲಿ ಆಗಸ್ಟ್ 15ರ ಬಳಿಕ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲಿದೆ ಅಂತ ಸರ್ಕಾರ ಹೇಳಿತ್ತು. ಅದರಂತೆ ಆಗಸ್ಟ್ 30ರಂದು ಯೋಜನೆಗೆ ಚಾಲನೆ ನೀಡಲು ಸಜ್ಜಾಗಿದ್ದು ನುಡಿದಂತೆ ನಡೆಯಲಿದೆ. ವರಮಹಾಲಕ್ಷ್ಮಿ ಹಬ್ಬದ ಹೊತ್ತಿಗೆ ಭಗಿನಿಯರು ಧನಲಕ್ಷ್ಮಿಯನ್ನು ಸ್ವಾಗತಿಸಲು ಉತ್ಸುಕರಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!