ಜನ ಮನದ ನಾಡಿ ಮಿಡಿತ

Advertisement

ಕೊರಗ ಸಮುದಾಯಕ್ಕೆ ಸಾಮಾಜಿಕ ಸ್ಪಂದನೆ ಅಗತ್ಯ; ಪತ್ರಕರ್ತ ತಾರಾನಾಥ ಗಟ್ಟಿ ಕಾಪಿಕಾಡ್

ದಕ್ಷಿಣ ಕನ್ನಡ : ತುಳುನಾಡಿನ ಆದಿ ಬುಡಮೂಲ ಕೊರಗ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇತರ ಸಮುದಾಯಗಳಿಂದ ಪೂರಕವಾದ ಸಾಮಾಜಿಕ ಸ್ಪಂದನೆ ಸಿಗಬೇಕಾಗಿದೆ ಎಂದು ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ, ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್  ಹೇಳಿದರು. 

 ಸುರತ್ಕಲ್ ಕುತ್ತೆತ್ತೂರು ಆದಿವಾಸಿ ಭವನದಲ್ಲಿ ದ.ಕ.ಜಿಲ್ಲಾ ಕೊರಗರ ಸಂಘ ಆಯೋಜಿಸಿದ   ಕೊರಗರ ಭೂಮಿ ಹಬ್ಬ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.‌

 ಮುಖ್ಯವಾಹಿನಿಯಲ್ಲಿ ಸಾಗುವಂತಾಗಲು ಆರ್ಥಿಕ ಹಾಗೂ ಸಾಮಾಜಿಕ ಸ್ಪಂದನೆ ಅಗತ್ಯವಾಗಿದೆ ಎಂದವರು ಅಭಿಪ್ರಾಯಪಟ್ಟರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದ.ಕ.ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಎಂ.ಸುಂದರ ಕೊರಗ ಅವರು ಮಾತನಾಡಿ,  ಕೊರಗರ ಐತಿಹಾಸಿಕ ಚಳವಳಿಯ ನೆನಪಿನಲ್ಲಿ ಈ ಕೊರಗರ ಭೂಮಿ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ನೆನಪಿಸಿದರು.   

ಕೊರಗ ಸಂಘಟನೆಯ ಮಾಜಿ ಅಧ್ಯಕ್ಷ ಬಾಲರಾಜ್ ಕೋಡಿಕಲ್ ಸಮುದಾಯದ ಚಳವಳಿ  ನಡೆದು ಬಂದ ದಾರಿಯನ್ನು ಉಲ್ಲೇಖಿಸಿ  ಚಳವಳಿ  ಕೊರಗರ ಬದುಕನ್ನು ಬದಲಾಯಿಸಿದ ಮಹತ್ವದ ಮೈಲಿಗಲ್ಲು ಎಂದು ಹೇಳಿದರು. 

ಉಡುಪಿ ಜಿಲ್ಲಾ ಕೊರಗ ಸಂಘದ ಅಧ್ಯಕ್ಷೆ ಗೌರಿ ಕೆಂಜೂರು ಅವರು ಮಾತನಾಡಿ, ಕೊರಗ ಸಮುದಾಯದ  ಹೋರಾಟವು  ಮಹಿಳೆಯರ  ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ನಡೆದಿತ್ತು ಎಂದು ಹೇಳಿದರು.

ಲೇಖಕ ಬಾಬು ಪಾಂಗಳ ಅವರು ಭೂಮಿ ಹಬ್ಬದ ಸಂದೇಶ ನೀಡಿದರು. ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಸುರೇಶ್ ಅಡಿಗ , ಸಮಗ್ರ ಗಿರಿಜನ ಯೋಜನಾ ಸಮನ್ವಯಾಧಿಕಾರಿ ಹೇಮಚಂದ್ರ ಅವರು ಶುಭಕೋರಿ ಮಾತನಾಡಿದರು. 

ಬಾಳಾ ಪಂಚಾಯತ್ ಅಧ್ತಕ್ಷ ಶಂಕರ್ ಜೋಗಿ , ಉಪಾಧ್ಯಕ್ಷೆ ಲಕ್ಷ್ಮಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯದ ಗುರಿಕಾರರಾದ ಜಬ್ಬ ಗುರಿಕಾರ ಬಳ್ಕುಂಜ , ನಾರಾಯಣ ಸಿರಿಗೆನ್ನಾರ್ , ರಾಜು ಗುರಿಕಾರ ಕತ್ತಲ್ ಸಾರ್ , ಸಮುದಾಯದ ಹಿರಿಯ ಮಹಿಳೆಯರಾದ ಲಲಿತಾ ಕೃಷ್ಣಾಪುರ, ಸುಮತಿ ಬಂಟ್ವಾಳ ಅವರನ್ನು ಸನ್ಮಾನಿಸಲಾಯಿತು. 

ರಮೇಶ್ ಗುಂಡಾವು ಕಾರ್ಯಕ್ರಮ ನಿರ್ವಹಿಸಿದರು. ಮನೋಜ್ ಕೋಡಿಕಲ್ ಸ್ವಾಗತಿಸಿ ವಂದಿಸಿದರು. 

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!