ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿಗರೇ, ಎಲ್ಲೆಂದರಲ್ಲಿ ಕಸ ಎಸೆದ್ರೆ ದಂಡ ಫಿಕ್ಸ್

ದಕ್ಷಿಣ ಕನ್ನಡ : ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ತ್ಯಾಜ್ಯ ಸಮಸ್ಯೆ ಮಿತಿಮೀರಿದೆ, ಒಂದೆಡೆ ಮಂಗಳೂರು ಮಹಾನಗರ ಪಾಲಿಕೆ ಶ್ರಮಪಟ್ಟು ತ್ಯಾಜ್ಯ ವಿಲೇವಾರಿಯನ್ನು ಮಾಡುಲು ಪ್ರಯತ್ನಿಸಿರುವಾಗಲೇ ಇದ್ದ ಕೆಲವೊಂದು ನಾಗರಿಕರು ಬೇಜವಾಬ್ದಾರಿಯನ್ನು ಪ್ರದರ್ಶಿಸುತ್ತಿದ್ದಾರೆ. ಅಂತವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಮತ್ತು ದಂಡ ವಿಧಿಸುವುದಾಗಿ ಅಗತ್ಯವಿದ್ದಲ್ಲಿ  ಮೊಕದ್ದಮೆ ದಾಖಲಿಸಿಕೊಳ್ಳುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

ಮಂಗಳೂರಿನಲ್ಲಿ ಕಟ್ಟಡ ತ್ಯಾಜ್ಯವನ್ನು ಫುಟ್‌ಪಾತ್‌ಗೆ ಎಸೆದ ವ್ಯಕ್ತಿಗೆ ಮಂಗಳೂರು ಪಾಲಿಕೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂಪಾಯಿ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಿದೆ. ವ್ಯಕ್ತಿಯೊಬ್ಬರು  ತ್ಯಾಜ್ಯವನ್ನು ತಂದು ಫುಟ್ ಪಾತ್ ನಲ್ಲಿ ಸುರಿದಿದ್ದರು. ಇದರ ಬಗ್ಗೆ ಸಾರ್ವಜನಿಕರು ಪಾಲಿಕೆಗೆ ದೂರು ನೀಡಿದ್ದರು. ಪಾಲಿಕೆ ಅಧಿಕಾರಿಗಳು ಸ್ವಚ್ಛತಾ ದರವೆಂದು 4 ಸಾವಿರ ದಂಡ ವಸೂಲು ಮಾಡಿದೆ.ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಯಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ತ್ಯಾಜ್ಯಗಳ ಬ್ಲ್ಯಾಕ್ ಉಂಟಾಗುತ್ತದೆ.

ಇದರಿಂದ ನಗರದ ಸೌಂದರ್ಯ ಹಾಗೂ ಸ್ವಚ್ಛತೆಗೆ ದಕ್ಕೆಯಾಗುತ್ತಿದೆ.ಈ ರೀತಿಯ ಅನಧಿಕೃತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸೌಂದರ್ಯಕ್ಕೆ ಹಾಗೂ ಸ್ವಚ್ಛತೆಗೆ ದಕ್ಕೆ ತರುವವರ ವಿರುದ್ದ ದಂಡ ವಿಧಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!