ಜನ ಮನದ ನಾಡಿ ಮಿಡಿತ

Advertisement

ಅಪರೂಪದ ಮೂಳೆ ಮಜ್ಜೆ ಕಸಿ ಯಶಸ್ವಿ;ಮೊದಲ ಪ್ರಕರಣ 

ಸಿವಿಯರ್‌ ಕಂಬೈನ್ಡ್ ಇಮ್ಯುನೊಡಿಫಿಶಿಯೆನ್ಸಿ ಎಂಬ ತೀವ್ರ ತರಹದ ರೋಗ ನಿರೋಧಕ ಶಕ್ತಿಯ ಕೊರತೆಯಿಂದ ಬಳಲುತ್ತಿರುವ ಮಗುವಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರ ತಂಡವು ಯಶಸ್ವಿ ಗ್ರಾಫ್ಟ್ ಮ್ಯಾನಿಪುಲೇಟೆಡ್‌ ಅರ್ಧ- ಹೊಂದಾಣಿಕೆಯ ಅಸ್ಥಿ ಮಜ್ಜೆ ಕಸಿ ನಡೆಸಿದೆ. ಇದು ಕರಾವಳಿ ಕರ್ನಾಟಕದಲ್ಲಿ ಮೊದಲ ಪ್ರಕರಣವಾಗಿದೆ.

ಅಪರೂಪದ ರಕ್ತದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ಉಳಿಸಲು ಆಸ್ಪತ್ರೆಯ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕಾಲಜಿ ವಿಭಾಗದ ವೈದ್ಯರ ತಂಡವು ವಿಶಿಷ್ಟವಾದ ಅಸ್ಥಿಮಜ್ಜೆಯ ಕಸಿ ಮಾಡಲು ನಿರ್ಧರಿಸಿತ್ತು.

ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಅರ್ಚನಾ ಎಂ.ವಿ. ಮಾತನಾಡಿ, “ರೋಗಿಯು ಮಾರಣಾಂತಿಕ ಕ್ಷಯರೋಗದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಕೀಮೋಥೆರಪಿ ಮತ್ತು ಇಮ್ಯುನೊಸಪ್ರಸಿವ್‌ ಔಷಧಗಳನ್ನು ಬಳಸಲಾಗಲಿಲ್ಲ. ಅಂತಹ ಔಷಧಗಳನ್ನು ತಪ್ಪಿಸಲು, ಟಿಸಿಆರ್‌ ಆಲ್ಫಾ ಬೀಟಾ ಡಿಪ್ಲೀಷನ್‌ ಎಂದು ಕರೆಯಲ್ಪಡುವ ಸ್ಟೆಮ್‌ ಸೆಲ್‌ ಗ್ರಾಫ್ಟ್ ಮ್ಯಾನಿಪ್ಯುಲೇಶನ್‌ ತಂತ್ರಜ್ಞಾನವನ್ನು ಬಳಸಲಾಯಿತು ಎಂದರು.

ಮಗುವಿಗೆ ಮೂಳೆ ಮಜ್ಜೆಯ ಕಸಿ ನಡೆಸಿ, 6 ವಾರಗಳ ಅನಂತರ ಸ್ಥಿರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಗುವು ರೋಗ ಮತ್ತು ಸೋಂಕಿನಿಂದ ಮುಕ್ತವಾಗಿ, ಆರೋಗ್ಯಕರ ಜೀವನ ನಡೆಸುವಂತಾಗಿದೆ ಎಂದರು.

ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ| ವಾಸುದೇವ ಭಟ್‌ ಕೆ. ಮಾಹಿತಿ ನೀಡಿ, ರಾಜ್ಯದ ಕರಾವಳಿ ಪ್ರದೇಶದಲ್ಲಿ ಯಶಸ್ವಿ ಟಿ ಸೆಲ್‌-ಡಿಪ್ಲೀಟೆಡ್‌ ಹ್ಯಾಪ್ಲೋಡೆಂಟಿಕಲ್‌ ಬೋನ್‌ ಮ್ಯಾರೋ ಟ್ರಾನ್ಸ್‌ಪ್ಲಾಂಟ್‌ಗೆ ಒಳಗಾದ ಮೊದಲ ಪ್ರಕರಣ ಇದು ಎಂದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!