ಜನ ಮನದ ನಾಡಿ ಮಿಡಿತ

Advertisement

ದೇಶದ ಜನತೆಗೆ ಗುಡ್‌ನ್ಯೂಸ್‌; ಅಡುಗೆ ಸಿಲಿಂಡರ್ ದರ ಭಾರೀ ಇಳಿಕೆ ಸಾಧ್ಯತೆ

ದೇಶದ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಾಬಂಧನಕ್ಕೆ ಬಿಗ್​ ಗಿಫ್ಟ್​ ನೀಡಲಿದ್ದಾರೆ.

ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಆಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮುಂದಿನ 24 ಗಂಟೆಯಲ್ಲಿ ಎಲ್‌ಪಿಜಿ ಬೆಲೆ ಇಳಿಕೆ ಬಗ್ಗೆ ಕೇಂದ್ರ ಸಂಪುಟ ಸಭೆಯಲ್ಲೇ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಂದಿನ ವರ್ಷ ನಡೆಯುವ ಲೋಕಸಭೆ ಹಾಗೂ ವರ್ಷಾಂತ್ಯದಲ್ಲಿ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬೆಲೆ ಇಳಿಕೆಯ ತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ಇತ್ತೀಚಿನ ಚುನಾವಣೆಗಳಲ್ಲಿ ಬೆಲೆ ಏರಿಕೆಯು ಪ್ರಮುಖ ವಿಷಯವಾಗಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಈ ನಿರ್ಧಾರವನ್ನು ಖಚಿತಪಡಿಸುವ ಸಾಧ್ಯತೆಯಿದೆ.

ಪ್ರಸ್ತುತವಾಗಿ 14 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ದೆಹಲಿಯಲ್ಲಿ 1053 ರೂಪಾಯಿ ಇದ್ದು, ಮುಂಬೈನಲ್ಲಿ 899.50 ರೂ ಮತ್ತು ಕೋಲ್ಕತ್ತಾದಲ್ಲಿ 1079 ರೂಪಾಯಿ ಇದೆ. ಇನ್ನು ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಇದ್ದವರಿಗೆ ಮಾತ್ರ ಸಿಲಿಂಡರ್‌ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಆಗುತ್ತದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!