ಜನ ಮನದ ನಾಡಿ ಮಿಡಿತ

Advertisement

ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ;ಗಂಭೀರವಾಗಿ ಗಾಯಗೊಂಡ ರಿಕ್ಷಾ ಚಾಲಕ

ಬಂಟ್ವಾಳ: ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.


ಅಟೋ ಚಾಲಕ ಮಹಮ್ಮದ್ ಸಾದಿಕ್ ಎಂಬಾತನಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಗೂಡಿನ ಬಳಿಯಲ್ಲಿರುವ ಆರೋಗ್ಯ ಕೇಂದ್ರಕ್ಕೆ ಸುರಕ್ಷಾ ಅಧಿಕಾರಿಯೋರರ್ವರನ್ನು ರಿಕ್ಷಾದಲ್ಲಿ ಮಹಮ್ಮದ್ ಸಾದಿಕ್ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಪಾಣೆಮಂಗಳೂರು ಕಡೆಯಿಂದ ಬರುವ ಕಾರೊಂದು ರೈಲು ನಿಲ್ದಾಣದ ಸಮೀಪವಿರುವ ಲಯನ್ಸ್ ಸೇವಾ ಮಂದಿರದ ಪಾರ್ಕ್ ನ ಮುಂಭಾಗದಲ್ಲಿ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ.ರಿಕ್ಷಾ ಚಾಲಕನಿಗೆ ಗಂಭೀರವಾಗಿ ಗಾಯವಾದರೆ ಪ್ರಯಾಣಿಕೆ ಅಮಿತಾ ಅವರು ಅಲ್ಪಸ್ವಲ್ಪ ಪ್ರಮಾಣದ ಗಾಯಗಳಿಂದ ಪಾರಾಗಿದ್ದಾರೆ.


ದುಡುಕುತನದಿಂದ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಕಾರು ಚಾಲಕ ಉಬೈದುಲ್ಲಾ ವಿರುದ್ದ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!