ಜನ ಮನದ ನಾಡಿ ಮಿಡಿತ

Advertisement

ಬಡಗನ್ನೂರು ಗ್ರಾ. ಪಂ. ನ ಮಾಜಿ ಸದಸ್ಯನ ಮನೆಗೆ ನುಗ್ಗಿದ ದರೋಡೆಕೋರರ ಗುಂಪು; ಚಿನ್ನ, ನಗದು ಹಣ ದೋಚಿ ಪರಾರಿ

ಪುತ್ತೂರು; ದರೋಡೆಕೋರರ ಗುಂಪುವೊಂದು ಬಡಗನ್ನೂರು ಗ್ರಾ. ಪಂ. ನ ಮಾಜಿ ಸದಸ್ಯ ಗುರುಪ್ರಸಾದ್‌ ರೈ ಕುಡ್ಕಾಡಿ ಅವರ ಮನೆಗೆ ನುಗ್ಗಿ ಚಿನ್ನ ಮತ್ತು ನಗದು ಹಣ ದೋಚಿ ಪರಾರಿಯಾದ ಘಟನೆ ನಡೆದಿದೆ.

ತೋಟದ ನಡುವೆ ಒಂಟಿಯಾಗಿರುವ ಮನೆಯಲ್ಲಿ ಗುರುಪ್ರಸಾದ್ ರೈ ಮತ್ತು ಅವರ ತಾಯಿ ಕಸ್ತೂರಿ ರೈ ಇಬ್ಬರೇ ವಾಸವಿದ್ರು. 7 ರಿಂದ 8 ಜನರಿದ್ದ ದರೋಡೆಕೋರರ ಗುಂಪು ಕೈಯಲ್ಲಿ ತಲವಾರು ಮತ್ತು ರಾಡ್ ನಂತಹ ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಿ ಜೀವಬೆದರಿಕೆಯೊಡ್ಡಿ, ತಾಯಿ ಮಗನನ್ನು ಕಂಬಕ್ಕೆ ಕಟ್ಟಿ ಹಾಕಿ ನಗದು ಮತ್ತು ಚಿನ್ನಾಭರಣ ದೋಚಿದ್ದಾರೆ.


ಗುರುತು ಸಿಗದಂತೆ ಮುಖವಾಡ ಧರಿಸಿ ಬಂದಿದ್ದ ದರೋಡೆಕೋರರ ಗುಂಪು, ಗುರುಪ್ರಸಾದ್ ರೈ ಯಾರನ್ನೂ ಸಂಪರ್ಕಿಸದಂತೆ ಅವರ ಮೊಬೈಲನ್ನು ನೀರಿಗೆ ಹಾಕಿದ್ದರು ಎಂದು ತಿಳಿದು ಬಂದಿದೆ.

ಅದು ಹೇಗೋ ಗುರುಪ್ರಸಾದ್ ರೈ ಸಂಪ್ಯ ಪೊಲೀಸರಿಗೆ ಮಾಹಿತಿ ನೀಡಿ̧ದ್ದು ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು, ಬೆರಳಚ್ಚು ತಜ್ಞರು, ಶ್ವಾನದಳ, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

ಬಂಟ್ವಾಳ: ಐದಾರು ತಿಂಗಳಿನಿಂದ ವಿಪರೀತ ಕುಡಿತದ ಚಟಕ್ಕೆ ಬಿದ್ದ ವ್ಯಕ್ತಿ ನಾಪ*ತ್ತೆ….!

ಬಂಟ್ವಾಳ: ತಂದೆ ತಾಯಿ ಕೆಲಸಕ್ಕೆ ಹೋದ ವೇಳೆ ಚಿನ್ನಾಭರಣ ಸಹಿತ ಮಗಳು ನಾಪತ್ತೆ…!

ಬಂಟ್ವಾಳ: ವಾರೆಂಟ್ ಆರೋಪಿ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ ಬಂಧನ…!

ಬಂಟ್ವಾಳ: ರಸ್ತೆಯಲ್ಲಿ ರಾಶಿ ಹಾಕಲಾಗಿದ್ದ ಕಾಂಕ್ರೀಟ್ ತುಂಡುಗಳಿಂದ ರಸ್ತೆ ಅಪಘಾತ…!

error: Content is protected !!