ಜನ ಮನದ ನಾಡಿ ಮಿಡಿತ

Advertisement

ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಉಗ್ರಾಣಿಗೆ ಪುತ್ತೂರು ಶಾಸಕ ಅಶೋಕ್‌ ರೈ ವಾರ್ನಿಂಗ್‌..!

ಪುತ್ತೂರು: ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಪುತ್ತೂರು ಶಾಸಕರಾದ ಅಶೋಕ್‌ ರೈಯವರು ಗ್ರಾಮವೊಂದರ ಉಗ್ರಾಣಿಗೆ ಸೂಚನೆಯನ್ನು ನೀಡಿದ್ದಾರೆ.

ಕುಂಡಡ್ಕದಲ್ಲಿ ಶ್ರೀ ಕೃಷ್ಣ ಅಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ ಶಾಸಕರ ಬಳಿ ಬಂದ ಚಂದ್ರಾವತಿ ಎಂಬ ಮಹಿಳೆ ನಾನು ಶಕುಂತಳಾ ಶೆಟ್ಟಿ ಶಾಸಕರಾಗಿದ್ದ ಸಂದರ್ಭದಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿದ್ದೆ ನನ್ನ ಮನೆ ಸರಕಾರಿ ಜಾಗದಲ್ಲಿದೆ.
ನನ್ನ ಮನೆ ಇರುವ ಜಾಗವನ್ನು ಸಕ್ರಮ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸಿದ್ದೇನೆ. ಸಲ್ಲಿಸಿದ ಅರ್ಜಿಯ ಎಲ್ಲಾ ದಾಖಲೆಗಳು ನನ್ನ ಬಳಿ ಇದೆ . ನಾನು ಅರ್ಜಿ ಕೊಟ್ಟಾಗ ನನ್ನಿಂದ ನನ್ನ ಗ್ರಾಮದ ಉಗ್ರಾಣಿ ಒಟ್ಟು 30 ಸಾವಿರ ಹಣವನ್ನು ಲಂಚವಾಗಿ ಪಡೆದುಕೊಂಡಿದ್ದಾರೆ. ಏಳು ವರ್ಷ ಕಳೆದರೂ ನನಗೆ ಅಕ್ರಮ ಸಕ್ರಮದಲ್ಲಿ ಜಾಗ ರೆಕಾರ್ಡ್‌ ಆಗಲಿಲ್ಲ, ನಾನು ಬಡವೆ, ನನ್ನಲ್ಲಿ ಏನೂ ಇಲ್ಲ. ನಾನು ಬೀಡಿಕಟ್ಟಿ ಜೀವನ ಮಾಡುವುದು, ಆದರೂ ನನ್ನಿಂದ ಹಣಪಡೆದುಕೊಂಡಿದ್ದಾರೆ.

ಹಣ ಕೊಟ್ಟರೂ ಕೆಲಸ ಮಾಡಿಲ್ಲ ನನಗೆ ನ್ಯಾಯ ಕೊಡಿ ಎಂದು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಕೂಡಲೇ ಹಣ ಪಡೆದುಕೊಂಡ ಉಗ್ರಾಣಿಗೆ ಕರೆ ಮಾಡಿದ ಶಾಸಕರು ಬಡ ಮಹಿಳೆಯಿಂದ ಲಂಚವಾಗಿ ಪಡೆದುಕೊಂಡ 30 ಸಾವಿರ ಹಣವನ್ನು ವಾರದೊಳಗೆ ಮಹಿಳೆಗೆ ಪಾವತಿಸಿಬೇಕು ಇಲ್ಲವಾದರೆ ಕೆಲಸದಿಂದ ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಹಿಳೆಗೆ ಸಾಂತ್ವನ ಹೇಳಿದ ಶಾಸಕರು ನಿಮ್ಮ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚನೆ ಕೊಡುತ್ತೇನೆ. ಅಕ್ರಮ ಸಕ್ರಮ ಸಮಿತಿಯಾದ ತಕ್ಷಣವೇ ನಿಮ್ಮ ಜಾಗ ನಿಮಗೆ ರೆಕಾರ್ಡ್ ಆಗಲಿದೆ ಎಂದು ಹೇಳಿದಾಗ ಮಹಿಳೆ ಶಾಸಕರಿಗೆ ಧನ್ಯವಾದ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!