ಜನ ಮನದ ನಾಡಿ ಮಿಡಿತ

Advertisement

ʼಹಬ್ಬದ ಆಚರಣೆಗೆ ಅಡ್ಡಿಪಡಿಸುವುದನ್ನು ನಾವು ಸಹಿಸುವುದಿಲ್ಲʼ; ಶಾಸಕ ವೇದವ್ಯಾಸ್‌ ಕಾಮತ್

ಮಂಗಳೂರು; ಮಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಹಲವು ಕಠಿಣ ನಿಯಮಗಳನ್ನು ಹೇರಲು ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಇದು ಸಾಂಪ್ರದಾಯಿಕ ಹಬ್ಬದ ಆಚರಣೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಕಾನೂನುಗಳನ್ನು ನೆಪವಾಗಿಟ್ಟುಕೊಂಡು ಹಬ್ಬದ ಆಚರಣೆಯ ಮೇಲೆ ನಿಯಂತ್ರಣ ಹೇರುವುದು ಸರಿಯಲ್ಲ. ಹಬ್ಬ ಆಚರಿಸುವ ಸಮಿತಿಯ ಪ್ರಮುಖರ ಫೋಟೋಗಳನ್ನು, ಆಚರಿಸುವ ಜಾಗದ ದಾಖಲೆಗಳನ್ನು ಠಾಣೆಗೆ ತಂದೊಪ್ಪಿಸಬೇಕು ಎಂಬ ನಿರ್ದೇಶನ ಸಮಂಜಸವಾದುದಲ್ಲ. ಸಮಿತಿಯಲ್ಲಿರುವ ಸದಸ್ಯರೆಲ್ಲರೂ ಗೌರವಾನ್ವಿತ ವ್ಯಕ್ತಿಗಳಾಗಿದ್ದಾರೆ. ಅವರ ಫೋಟೋಗಳನ್ನು ಠಾಣೆಗೆ ತರಿಸುವ ವ್ಯವಸ್ಥೆ ಎಷ್ಟು ಸರಿ ?

ಇನ್ನೂ ಹಬ್ಬದ ಆಚರಣೆಯ ಸಂದರ್ಭ ಮೆರವಣಿಗೆಗಳನ್ನು ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು ಎಂಬ ನಿಯಮ ಹೇಳಿರುವುದು ಮೆರವಣಿಗೆಯನ್ನು ಹತ್ತಿಕ್ಕುವ ಯತ್ನದ ಒಂದು ಭಾಗವಾಗಿದೆ. ಮಂಗಳೂರು ವಿವಿಯಲ್ಲಿ ಕೂಡಾ ಗಣೇಶ ಹಬ್ಬ ಆಚರಣೆ ಮಾಡಬಾರದು ಎಂಬ ಸೂಚನೆಯೂ ಕಾಂಗ್ರೆಸ್ ಸರಕಾರದ ಹಿಡನ್ ಅಜೆಂಡಾವೇ ಆಗಿದೆ. ಸಾಂಪ್ರದಾಯಿಕವಾಗಿ ಈ ಹಿಂದಿನಂತೆ ನಡೆದು ಬಂದ ಹಬ್ಬವು ಯಥಾಸ್ಥಿತಿ ಆಚರಣೆಗೆ ಆಡಳಿತ ಅವಕಾಶ ಮಾಡಿಕೊಡಬೇಕು. ಬಿಜೆಪಿ ಸರ್ಕಾರ ಆಡಳಿತವಿದ್ದ ಸಂದರ್ಭ ಹಬ್ಬದ ಆಚರಣೆಗಳಿಗೆ ಯಾವುದೇ ಕಟ್ಟುನಿಟ್ಟಿನ ನಿಬಂಧನೆಗಳನ್ನು ವಿಧಿಸಲಾಗಿರಲಿಲ್ಲ. ಇದೀಗ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಹಿಂದೂಗಳ ಸಾಂಪ್ರದಾಯಕ ಹಬ್ಬದ ಆಚರಣೆಗಳ ಮೇಲೆ ನಿಯಂತ್ರಣ ಹೇರಿ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಹಬ್ಬದ ಆಚರಣೆಗೆ ಅಡ್ಡಿಪಡಿಸುವುದನ್ನು ನಾವು ಸಹಿಸುವುದಿಲ್ಲ ಎಂದು ಶಾಸಕ ವೇದವ್ಯಾಸ್‌ ಕಾಮತ್ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!