ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದಲ್ಲಿ ತೀವ್ರ ಮಳೆ ಕೊರತೆ ಕಾಡುತ್ತಿದ್ದು, ಪ್ರಸ್ತುತ ಬತ್ತದ ಬೆಳೆಗಾರರು ಕಂಗಾಲಾಗಿದ್ದಾರೆ, ಹೀಗೆ ಮುಂದುವರೆದ ಲ್ಲಿ ಮುಂದಿನ ದಿನಗಳಲ್ಲಿ ಇತರ ಬೆಳೆಗಳಿಗೂ ನೀರಿನ ಅಭಾವ ತಲೆದೋರುವ ಎಲ್ಲ ಸಾಧ್ಯತೆಗಳಿವೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಬರಗಾಲ ಬರುವ ಸಾಧ್ಯತೆ ಇದೆ, ಆಹಾರ ಉತ್ಪನ್ನಕ್ಕಾಗಿ ಪರದಾಡುವ ಕಾಲ ಎದುರಾಗಬಹುದು.

ಕರಾವಳಿ ಕರ್ನಾಟಕದ ಪ್ರಮುಖ ಆಹಾರ ಭತ್ತದಿಂದ ಬೆಳೆಯುವ ಅನ್ನ, ಬತ್ತದ ಬೆಳೆಯೇ ಈಗ ನೀರಿನ ಅಭಾವದಿಂದ ತೀವ್ರ ಸಂಕಷ್ಟಕ್ಕೆ ತುತ್ತಾಗಿದ್ದು ಮುಂದಿನ ದಿನಗಳಲ್ಲಿ ಅಕ್ಕಿ ಬೆಲೆ ತೀವ್ರ ಗತಿಯಲ್ಲಿ ಇರುವ ಸಾಧ್ಯತೆ ಇದೆ, ಅದೇ ರೀತಿ ವಾಣಿಜ್ಯ ಬೆಳೆಗಳು ಕೂಡ ಆಹಾರ ಉತ್ಪನ್ನ ಕೊರತೆಗೆ ಕಾರಣವಾಗಬಹುದು ಎಂಬುದು ತಜ್ಞರ ಅಭಿಪ್ರಾಯ. ಕರಾವಳಿ ಕರ್ನಾಟಕದ ರೈತರಿಂದ ಭತ್ತದ ಸಸಿಗಳ ಒಣಗುವಿಕೆಯ ಕುರಿತು ಸಮಸ್ಯೆ ವರದಿಯಾದ ಹಿನ್ನೆಲೆ, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವರದಿಯ ಪ್ರಕಾರ ಆಗಸ್ಟ್ ತಿಂಗಳಿನಲ್ಲಿ ಮಳೆಯಾಗದೇ ಇರುವುದರಿಂದ ಪ್ರಮುಖವಾಗಿ ಭತ್ತದ ಬೆಳೆ ಸೋತು ಸೊರಗುತ್ತಿರುತ್ತದೆ. ಗದ್ದೆಗಳಲ್ಲಿ ನೀರಿಲ್ಲದ ಕಾರಣ ಕಳೆಗಳು ಹಾಗೂ ನೀರಿನ ಸಮಸ್ಯೆಯಿಂದಾಗಿ ಮೇಲು ಗೊಬ್ಬರ ಕೊಡಲು ಸಾಧ್ಯವಾಗದೇ ಇದ್ದುದರಿಂದ ಪೋಷಕಾಂಶಗಳ ಕೊರತೆ ಕಾಣುತ್ತಿದೆ.

ಮುಖ್ಯವಾಗಿ ಪೋಟಾಷ್ ಕೊರತೆಯಿಂದಾಗಿ ಭತ್ತದ ಎಲೆಗಳು ಕೆಂಪು ಬಣ್ಣಕ್ಕೆ ತಿರುಗಿ ಹೆಚ್ಚು ತೆಂಡೆಗಳು ಒಡೆಯದೇ ಒಣಗುವ ಸ್ಥಿತಿಯಲ್ಲಿರುತ್ತದೆ. ಎಲೆಗಳು ಕೆಂಪಾಗುತ್ತಿರುವುದು ಹೆಚ್ಚಾಗಿ ಕಂಡುಬಂದಿದ್ದು, ಯಾವುದೇ ಕೀಟ ರೋಗದ ಭಾದೆ ಇರುವುದಿಲ್ಲ ಎಂಬ ಅಂಶಗಳನ್ನು ಗಮನಿಸಲಾಗಿರುತ್ತದೆ, ನೀರಿನ ಕೊರತೆ ಮೂಲ ಕಾರಣ ಎನ್ನಲಾಗಿದೆ.

ನೀರೊದಗಿಸುವ ಸಾಧ್ಯತೆಯಿರುವ ಕಡೆ ಮಳೆಗಾಗಿ ಕಾಯದೇ ಕೂಡಲೇ ನೀರು ಒದಗಿಸುವುದು, ಭೂಮಿಯ ಫಲವತ್ತತೆ ಪರೀಕ್ಷೆ ಮಾಡಿಸುವುದು, ನೀರು ಒದಗಿಸಿದ ಗದ್ದೆಗಳಿಗೆ ಯುರಿಯಾ 30 ಕೆ.ಜಿ ಹಾಗೂ ಎಂ.ಒ.ಪಿ 15 ಕಿ.ಗ್ರಾಂ ಪ್ರತಿ ಎಕರೆಗೆ ಮೇಲು ಗೊಬ್ಬರವಾಗಿ ನೀಡುವುದು ಹಾಗೂ ಗದ್ದೆಗಳಲ್ಲಿ ಕಳೆ ನಿಯಂತ್ರಣ ಮಾಡುವ ಮೂಲಕ ವೈಜ್ಞಾನಿಕ ಸಲಹೆಗಳನ್ನು ಅನುಸರಿಸುವಂತೆ ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.



