ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್ . ಭೋಸರಾಜುರವರು, ಸಣ್ಣ ನೀರಾವರಿ ಇಲಾಖೆ ವತಿಯಿಂದ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸಂಪರ್ಕ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣದ ಕಾಮಗಾರಿಯನ್ನು ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಬಳಿಕ ಅಧಿಕಾರಿಗಳ ಜೊತೆ ಮಾತಾನಾಡಿದ ಸಚಿವರು, ಬೆಳ್ತಂಗಡಿ ರಸ್ತೆಯಿಂದ ನರಿಕೊಂಬು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಅಣೆಕಟ್ಟು ಸಂಪರ್ಕ ರಸ್ತೆಯ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಅದಕ್ಕೆ ಬೇಕಾದ ಜಾಗದ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿಕೊಡುವಂತೆ ಸೂಚನೆ ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ರಾಜಕೀಯ ಪ್ರಮುಖರು ಸೇರಿದಂತೆ ಹಲವರು ಉಪಸ್ಥಿತರಿದ್ದರು.




