ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 21,763 ಪ್ರಕರಣಗಳು ದಾಖಲು; 1 7.97 ಲಕ್ಷ ರೂ.ಪರಿಹಾರ ವಸೂಲು

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳ ಆವರಣದಲ್ಲಿ ನಡೆದಿದೆ.


ಒಟ್ಟು 48 ಬೈಠಕ್‍ಗಳು ನಡೆದಿದ್ದು, ಅದಾಲತ್‍ನಲ್ಲಿ ಒಟ್ಟು 21,763 ಪ್ರಕರಣಗಳು ಪರಿಗಣಿಸಲಾಗಿತ್ತು; ಅದರಲ್ಲಿ 14,840 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 17,97,64,778 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ತಿಳಿಸಿದ್ದಾರೆ.

ಈ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ಈ ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಇದ್ರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!