ಜನ ಮನದ ನಾಡಿ ಮಿಡಿತ

Advertisement

“ಸೆ. 19 ರಂದು ಮಂಗಳೂರು ವಿ.ವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಮಾಡುತ್ತೇವೆ”; ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಸವಾಲ್‌

ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಗಣಪತಿ ಕೂರಿಸೋ ವಿಷಯದಲ್ಲಿ ವಿವಾದವೊಂದು ಭುಗಿಲೆದ್ದಿದೆ. ಈ ವಿವಾದಕ್ಕೆ ಮುಖ್ಯ ಕಾರಣ ಗಣಪನನ್ನು ಕೂರಿಸುವ ಜಾಗ, ಖರ್ಚು ವೆಚ್ಚಕ್ಕೆ ತಗಲೋ ಹಣ ಎಲ್ಲಿಂದ? ಎನ್ನುವುದಾಗಿದೆ.

ಮಂಗಳೂರು ವಿವಿಯಲ್ಲಿ ಕಳೆದ 40 ವರ್ಷಗಳಿಂದ ಗಣೇಶೋತ್ಸವ ನಡೀತಾ ಇದೆ. ಮಂಗಳಾ ಆಡಿಟೋರಿಯಂನಲ್ಲೇ ಗಣೇಶ ಮೂರ್ತಿ ಸ್ಥಾಪನೆ ಮಾಡಿ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಬಾರಿಯ ಗಣೇಶೋತ್ಸವ ಆಚರಣೆಗೆ ಮಂಗಳಾ ಆಡಿಟೋರಿಯಲ್ಲಿ ಸ್ಥಾಪನೆ ಬೇಡ ಎಂದು ತಕರಾರು ಎದ್ದಿದೆ.


ಆದರೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸೆ.19ರಂದು ಮಂಗಳೂರು ವಿವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಸಿದ್ಧ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಹೇಳಿದ್ದಾರೆ.


ನಮಗೆ ಈಗ ಸಮಸ್ಯೆ ಬಂದಿರುವುದು ಕಾಂಗ್ರೆಸ್ ನಿಂದ ಕಾಂಗ್ರೆಸ್ ನಮ್ಮನ್ನ , ಹೇಡಿಗಳನ್ನಾಗಿ ಮಾಡಿತು. ಈಗಲೂ ಪಾಕಿಸ್ತಾನ ಜಿಂದಾಬಾದ್ ಹೇಳುವವರು ಇದಾರೆ. ಅವರಿಗೆ ಕುಮ್ಮಕ್ಕು ಕೊಡುವವರು ಇದ್ದಾರೆ. ನಾವು ಸೆಪ್ಟೆಂಬರ್ 19 ರಂದು ಮಂಗಳೂರು ವಿವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಮಾಡುತ್ತೇವೆ ಎಂದು ಮಂಗಳೂರು ವಿವಿ ಉಪಕುಲಪತಿ ನಡೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!