ಜನ ಮನದ ನಾಡಿ ಮಿಡಿತ

Advertisement

ನಗರದ ಪಂಪ್ವೆಲ್‌ ನಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿದ ಯುವತಿ; ವಿಡಿಯೋ ವೈರಲ್..

ಯುವತಿಯೊಬ್ಬಳನ್ನು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟಂತಹ ಘಟನೆಯೊಂದು ನಡೆದಿದೆ.

ಪಂಪ್ವೆಲ್‌ನಲ್ಲಿ ಮೆಡಿಕಲ್‌ ಒಂದಕ್ಕೆ ಬಂದಿದ್ದ ಯುವತಿಯೋರ್ವಳು ಎಲ್ಲರ ಮೇಲೆ ಆಕ್ರಮಣಕಾರಿಯಾಗಿ ವರ್ತನೇ ಮಾಡುತ್ತಿದ್ದು, ಇದನ್ನು ಕಂಡ ರೌಂಡ್ಸ್‌ ಅಬಕಾರಿ ಇಲಾಖೆಯವರು ಆಕೆಯನ್ನು ಹಿಡಿದು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಕೆ ಪೊಲೀಸರ ಮೇಲೆ ದಾಳಿ ಮಾಡಿದ್ದು, ಬೇರೆ ವಿಧಿಯಿಲ್ಲಿ ಯುವತಿಯನ್ನು ಕದ್ರಿ ಠಾಣೆಗೆ ತಂದಿದ್ದಾರೆ.


ಯುವತಿ ಅಲ್ಲಿ ಕೂಡಾ ಮಹಿಳಾ ಪೊಲೀಸರಿಗೆ ತನ್ನ ಕಾಲಿನಿಂದ ಒದ್ದಿದ್ದಾಳೆ. ನಂತರ ಯುವತಿಯ ಕೈಗೆ ಕೋಳ ತೊಡಿಸಿ ಕೈ ಕಾಲು ಕಟ್ಟಿ ಆಸ್ಪತ್ರೆಗೆ ಒಯ್ದಿದ್ದು ತಪಾಸಣೆ ಮಾಡಲಾಗಿದೆ.

ಡ್ರಗ್ಸ್‌ ಏನಾದರೂ ತಗೊಂಡು ಈ ರೀತಿ ವರ್ತನೆ ಮಾಡುತ್ತಿದ್ದಾಳೆಯೇ ಎಂದು ಚೆಕ್‌ ಮಾಡಿದಾಗ, ಇದೆಲ್ಲ ನೆಗೆಟಿವ್‌ ಬಂದಿದೆ. ನಂತರ ಆಕೆಯ ಪೋಷಕರ ಬಗ್ಗೆ ಕೇಳಿದಾಗ ಏನೂ ಮಾಹಿತಿ ನೀಡುತ್ತಿರಲಿಲ್ಲ. ಒಮ್ಮೆ ಹಿಂದಿ, ಇಂಗ್ಲೀಷ್‌ ಮಾತನಾಡುವ ಈಕೆಯನ್ನು ಕೊನೆಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಒಯ್ಯುವ ಸಂದರ್ಭದಲ್ಲಿ ನನ್ನ ಮನೆ ಇಲ್ಲಿದೆ ಎಂದಿದ್ದಾಳೆ. ಕೊನೆಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಿ, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಯುವತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗ್ತಾ ಇದೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!