ಜನ ಮನದ ನಾಡಿ ಮಿಡಿತ

Advertisement

ಮೆಲ್ಕಾರ್: ನಿಲ್ಲಿಸಿದ್ದ ಲಾರಿ ಏಕಾಏಕಿ ಮುಂದೆ ಚಲಿಸಿ ಅಪಘಾತ; ಇಬ್ಬರಿಗೆ ಗಾಯ

ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ಇಂದು ಮೆಲ್ಕಾರ್ ಎಂಬಲ್ಲಿ ನಡೆದಿದೆ.

ವಿದ್ಯಾರ್ಥಿನಿ ಹಜ್ರಾ ಶಾಮ (20) ಹಾಗೂ ಖತೀಜಾತುಲ್ (18) ಗಾಯಗೊಂಡವರು. ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿಯೊಂದು ಮೆಲ್ಕಾರ್ ನಲ್ಲಿ ಅಪಘಾತಕ್ಕೆ ಕಾರಣವಾಗಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮೆಲ್ಕಾರ್ ಎಂಬಲ್ಲಿ ‌ಸರ್ವಿಸ್ ರಸ್ತೆಯಲ್ಲಿ ಮಧ್ಯಾಹ್ನ ಕೆ.ಎನ್.ಆರ್. ಸಿ. ಕಂಪೆನಿಗೆ ಸೇರಿದ ಲಾರಿಯ ಚಾಲಕ ರಸ್ತೆಯಲ್ಲಿ ‌ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಆದರೆ ಹ್ಯಾಂಡ್ ಬ್ರೇಕ್ ‌ಹಾಕದ ಕಾರಣ ಲಾರಿ ಮುಂದೆ ಚಲಿಸಿದ್ದು , ಅಲ್ಲಿಯೇ ಇದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಮುಂದೆ ಸಾಗಿದ ಲಾರಿ ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಗೆ ವಾಲಿ ನಿಂತಿದೆ.

ಡಿಕ್ಕಿಹೊಡೆದ ಪರಿಣಾಮ ಅವರಿಬ್ಬರೂ ರಸ್ತೆ ಬದಿಯಲ್ಲಿರುವ ನೀರು ಹೋಗುವ ಸಣ್ಣ ಕಣಿಗೆ ಬಿದ್ದಿದ್ದಾರೆ. ಇಬ್ಬರಿಗೂ ಗಾಯವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಆನಂದ ಪಾಸ್ವಾನ್ ರವರ ನಿರ್ಲಕ್ಷ್ಯವೇ ಕಾರಣ ಎಂದು ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!