ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಇದೇ ಬರುವ ಅ. 28, 29 ರಂದು ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಸಚಿವರಾದ ರಮಾನಾಥ ರೈ ಇವರನ್ನು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಪರವಾಗಿ ಪ್ರೀತಿಪೂರ್ವಕವಾಗಿ ಆಹ್ವಾನಿಸಿದ್ದಾರೆ.

ಈ ಸಂದರ್ಭದಲ್ಲಿ ನದ್ಯಂಪ್ಪ ಶೆಟ್ಟಿ ಗೌರವ ಕಾರ್ಯದರ್ಶಿ ಬಂಟರ ಸಂಘ ಮೈಸೂರ್, ಒಕ್ಕೂಟದ ನಿರ್ದೇಶಕರಾದ ಅಶೋಕ್ ಶೆಟ್ಟಿ ಬೆಳ್ಳಾಡಿ, ಪೋಷಕರಾದ ಗಿರೀಶ್ ಶೆಟ್ಟಿ ತೆಳ್ಳರ್, ಚಂದ್ರಹಾಸ್ ಶೆಟ್ಟಿ ರಂಗೋಲಿ, ಉಪೇಂದ್ರ ಶೆಟ್ಟಿ ಬೆಂಗಳೂರು, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ದೇವಿಪ್ರಸಾದ್ ಶೆಟ್ಟಿ, ದಿನಕರ್ ಶೆಟ್ಟಿ ಬೆಳ್ಳಾಡಿ, ಪ್ರವೀಣ್ ಶೆಟ್ಟಿ, ಭೋಜರಾಜ್ ಶೆಟ್ಟಿ, ಮಧುಕರ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.



