ಜನ ಮನದ ನಾಡಿ ಮಿಡಿತ

Advertisement

ಅಕ್ಟೋಬರ್ 28 ಮತ್ತು 29 ರಂದು ನಡೆಯುವ ವಿಶ್ವ ಬಂಟರ ಕಾರ್ಯಕ್ರಮದ ಕರಪತ್ರ ಬಿಡುಗಡೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಇದೇ ಬರುವ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮಿಲನ‌ದ ಪ್ರಯುಕ್ತ ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಕರಪತ್ರವನ್ನು ಸೆ. 15ರಂದು ಬೆಂಗಳೂರಿನ ಬಂಟರ ಸಂಘದಲ್ಲಿ ಇದರ ಅಧ್ಯಕ್ಷರಾದ ಮುರಳೀಧರ ಹೆಗ್ಡೆಯವರು ಬಿಡುಗಡೆ ಮಾಡಿದ್ದಾರೆ.


ಜಾಗತಿಕ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಕಾರ್ಯಕ್ರಮದ ವಿವರ ನೀಡಿ ಬೆಂಗಳೂರಿನ ಸಮಸ್ತ ಬಂಟರನ್ನು ಕಾರ್ಯಕ್ರಮಕ್ಕೆ ಪ್ರೀತಿಪೂರ್ವಕವಾಗಿ ಆಹ್ವಾನಿಸಿದ್ದಾರೆ.
ಅಜಿತ್ ಶೆಟ್ಟಿ ಉಳ್ತುರು ಇವರು ಕಾರ್ಯಕ್ರಮ ನಿರ್ವಹಿಸಿದ್ದು, ಕ್ರೀಡಾಸಮಿತಿ ಸಂಚಾಲಕರಾದ ಗಿರೀಶ್ ಶೆಟ್ಟಿ ತೆಳ್ಳರ್ ಮತ್ತು ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಚಂದ್ರಹಾಸ ಶೆಟ್ಟಿಯವರು ಕಾರ್ಯಕ್ರಮದ ರೂಪುರೇಷೆ ನಿಯಮಗಳ ಬಗ್ಗೆ ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿಯವರನ್ನು ಬೆಂಗಳೂರು ಬಂಟರ ಸಂಘದ ವತಿಯಿಂದ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಒಕ್ಕೂಟದ ನಿರ್ದೇಶಕರಾದ ಅಶೋಕ್ ಶೆಟ್ಟಿ ಬೆಳ್ಳಾಡಿ, ಎಂ‌. ನಂದ್ಯಪ್ಪ ಶೆಟ್ಟಿ ಗೌ ಕಾರ್ಯದರ್ಶಿ ಬಂಟರ ಸಂಘ ಮೈಸೂರ್, ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಬಂಟರ ಸಂಘ ಬೆಂಗಳೂರು ಇದರ‌ ಮಾಜಿ ಅಧ್ಯಕ್ಷರಾದ ಉಪೇಂದ್ರ ಶೆಟ್ಟಿ, ಗೌರವ ಕಾರ್ಯದರ್ಶಿಗಳಾದ ಆನಂದರಾಮ‌‌ಶೆಟ್ಟಿ, ಉಪಾದ್ಯಕ್ಷರಾದ ಡಾ. ಜಗದೀಶ ಶೆಟ್ಟಿ, ಶ್ರೀಮತಿ ಗೀತಾಂಜಲಿ ಅಜಿಲ, ಖಜಾಂಚಿ ಅಮರನಾಥ‌ಶೆಟ್ಟಿ ಜೊತೆ ಕಾರ್ಯದರ್ಶಿ ಶ್ಯಾಮಲ ಶೆಟ್ಟಿ,ಕಾರ್ಯಕಾರಿ ಸಮಿತಿ ಸದಸ್ಯರಾದ ಸುದೀಪ ನೈಕ್, ಕೀರ್ತನ್ ಶೆಟ್ಟಿ, ನಿರಂಜನ್ ಶೆಟ್ಟಿ, ಜಯಶ್ರೀ ಸಿ ರೈ, ಸುಧಾಕರ ಶೆಟ್ಟಿ, ಸಂದೀಪ ಶೆಟ್ಟಿ, ಕಿರಣ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಚಂದ್ರಹಾಸ ರೈ,‌ ಮಾಜಿ ಉಪಾಧ್ಯಕ್ಷರಾದ ಬೋಜರಾಜ ಶೆಟ್ಟಿ ಕೊರ್ಗಿ, ‌ಮಾಜಿ‌ ಕಾರ್ಯದರ್ಶಿ ಮಧುಕರ ಶೆಟ್ಟಿ, ಹಾಗೂ ಬಂಟರ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!