ಸುರತ್ಕಲ್ : ಅತಿವೇಗ ಮತ್ತು ಅಜಾಗರೂಕತೆಯಿಂದ ಖಾಸಗಿ ಎಕ್ಸ್ ಪ್ರೆಸ್ ಬಸ್ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಬೆಟ್ಟು ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಹಳೆಯಂಗಡಿ ಇಂದಿರಾ ನಗರ ನಿವಾಸಿ ಮುಹಮ್ಮದ್ ಸಾಹಿಲ್ ಮತ್ತು ಪಕ್ಷಿಕೆರೆ ಹೊಸಕಾಡು ನಿವಾಸಿ ಅರಾಫತ್ ಎಂದು ಗುರುತಿಸಲಾಗಿದೆ .

ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಎಕ್ಸ್ ಪ್ರೆಸ್ ಬಸ್ಸು ಸುರತ್ಕಲ್ ಹೊಸಬೆಟ್ಟು ಎಂಬಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ರಸ್ತೆ ಬದಿ ಬೈಕ್ ನೊಂದಿಗೆ ನಿಂತಿದ್ದ ಯುವಕರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಖಾಸಗಿ ಎಕ್ಸ್ ಪ್ರೆಸ್ ಬಸ್ಸಿನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾವಣೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಇನ್ನು ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಬಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.



