ಜನ ಮನದ ನಾಡಿ ಮಿಡಿತ

Advertisement

ಹೃದಯಾಘಾತದಿಂದ ಸಾವನ್ನಪ್ಪಿದ ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ

ದಕ್ಷಿಣ ಕನ್ನಡ; ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ನಡೆದಿದೆ.

ನಗರದ ಉರ್ವ ಮಾರಿಗುಡಿ ನಿವಾಸಿಯಾದ ರಾಜೇಶ್ ಬಿ.ಯು. (53) ಅವರಿಗೆ ಶನಿವಾರ ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಅವರು ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಅವರು ಕೊನೆಯುಸಿರೆಳೆದಿದ್ದಾರೆ.

ರಾಜೇಶ್ ಅವರು 1993ನೇ ಬ್ಯಾಚ್ ಗೆ ಸೇರಿದವರಾಗಿದ್ದು, ನಿವೃತ್ತಿಗೆ ಇನ್ನೂ 7 ವರ್ಷಗಳ ಕಾಲ ಇತ್ತು. ಉತ್ತಮ ಸನ್ನಡತೆಯ ವ್ಯಕ್ತಿಯಾಗಿದ್ದ ರಾಜೇಶ್ ಇವರು ಮೂಲತಃ ವಾಮಂಜೂರು ಸಮೀಪದ ಮೂಡುಶೆಡ್ಡೆ ನಿವಾಸಿಯಾಗಿದ್ದು , ಪ್ರಸ್ತುತ ಮಂಗಳೂರಿನಲ್ಲಿ  ವಾಸವಿದ್ದರು, ರಾಜೇಶ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಕ್ರಮವಾಗಿ ಮೂಡು ಶೆಡ್ಡೆ  ಹಾಗೂ ಸಂತ ರೈಮೆಂಡ್ಸ್ ಹೈಸ್ಕೂಲ್ ವಾಮಂಜೂರು ಇಲ್ಲಿ ಪೂರೈಸಿದ್ದು, ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೆ ಶಾಲಾ ಶಿಕ್ಷಕರು ಮತ್ತು ತನ್ನ ಸಹಪಾಠಿ ವಿದ್ಯಾರ್ಥಿಗಳೊಡನೆ ಈಗಲೂ ನಿರಂತರ ಸಂಪರ್ಕವಿಟ್ಟುಕೊಂಡು, ಶಾಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಮಾದರಿ ಹಿರಿಯ ವಿದ್ಯಾರ್ಥಿ ಎನಿಸಿಕೊಂಡಿದ್ದರು.

ಅವರು ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!