ಜನ ಮನದ ನಾಡಿ ಮಿಡಿತ

Advertisement

ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ಬಿಜೆಪಿ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ನಿಧನ

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಸಾವನ್ನಪ್ಪಿದ ಘಟನೆ ನಡೆದಿದೆ.


ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿಯಾಗಿದ್ದು, ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು.


ಔಷಧಿಗೆಂದು ಅವರು ಇಂದು‌ ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಜ್ವರದಿಂದ ಬಳಲುತ್ತಿದ್ದ ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ರಾಜೇಶ್ ನಾಯ್ಕ್ ಸಹಿತ ಅನೇಕ ಬಿಜೆಪಿ ಪ್ರಮುಖರು ಬಂಟ್ವಾಳ ಆಸ್ಪತ್ರೆಗೆ ಧಾವಿಸಿ ಬಂದಿದ್ದು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂತ್ ಅಧ್ಯಕ್ಷ ದೇವದಾಸ ಶೆಟ್ಟಿ ಸಹಿತ ಅನೇಕ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!