ಜನ ಮನದ ನಾಡಿ ಮಿಡಿತ

Advertisement

ಪಾಣೆಮಂಗಳೂರು ಸೇತುವೆ ಬಳಿ ಕಾರು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ ಕಾರು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.


ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು. ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು. ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.
ಡಿಕ್ಕಿಯಾಗಿ ಸೇತುವೆ ಮೇಲಿದ್ದ ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು. ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ‌ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ.

ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ. ಟ್ರಾಫಿಕ್ ಎಸ್.ಐ.ಸುತೇಶ್, ಎ.ಎಸ್.ಐ.ಸುರೇಶ್ ಹಾಗೂ ಟ್ರಾಫಿಕ್ ಪೋಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳದಲ್ಲಿದ್ದು ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!