ಬಂಟ್ವಾಳ: ಬಂಟ್ವಾಳ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಇಂದು ಮಧ್ಯಾಹ್ನ ವೇಳೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ. ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದ್ರು. ವಿವೇಕಾನಂದ ಅವರು ವರ್ಗಾವಣೆ ಆದ ಬಳಿಕ ಖಾಲಿಯಾಗಿದ್ದ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿ ಕದ್ರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದು, ಲೋಕಾಯುಕ್ತ ಇಲಾಖೆಗೆ ವರ್ಗಾವಣೆಗೊಂಡಿದ್ದ ಆನಂತಪದ್ಮನಾಭ ಅವರನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸರಕಾರ ಅದೇಶ ಮಾಡಿತ್ತು.
ಕಳೆದ ವಾರ ಇವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತಾದರೂ ಅನಾರೋಗ್ಯದ ಕಾರಣ ಇವರು ಇಂದು ಠಾಣೆಯಲ್ಲಿ ಚಾರ್ಜ್ ತೆಗೆದುಕೊಂಡರು. ಕದ್ರಿ ಪೋಲಿಸ್ ಠಾಣೆಯಲ್ಲಿ ಉತ್ತಮ ಅಧಿಕಾರಿ ಎಂದು ಹೆಸರು ಗಳಿಸಿದ್ದ ಇವರು ಕೋಮು ಸೂಕ್ಷ್ಮವಾದ ಬಂಟ್ವಾಳಕ್ಕೆ ಬರಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ.
ರಾಜಕೀಯವಾಗಿ ಬಲಾಡ್ಯವಾದ ಮತ್ತು ಸೂಕ್ಷ್ಮ ಪ್ರದೇಶವಾಗಿ ಹೆಸರು ಗಳಿಸಿರುವ ಬಂಟ್ವಾಳಕ್ಕೆ ಅಧಿಕಾರಿಗಳು ಬರಲು ಒಪ್ಪುವುದಿಲ್ಲ ಎಂಬ ಮಾತುಗಳು ಈ ಹಿಂದೆ ಕೇಳಿ ಬಂದಿತ್ತು. ಆದರೆ ಕಳೆದ ಐದು ವರ್ಷಗಳಿಂದ ಶಾಂತಿಯ ಬಂಟ್ವಾಳವಾಗಿ ಮಾರ್ಪಾಡು ಹೊಂದಿದ್ದು, ನಿಷ್ಠಾವಂತ ಅಧಿಕಾರಿಗಳ ಸೇವೆ ಕೂಡ ನೆನಪಿಸಬೇಕಾಗುತ್ತದೆ.



