ಜನ ಮನದ ನಾಡಿ ಮಿಡಿತ

Advertisement

ಗಾಂಜಾ ಮತ್ತು ಮಾದಕ ವಸ್ತುವನ್ನು ಸೇವಿಸಿ ಮಹಿಳೆಯರಿಗೆ ತೊಂದರೆ ನೀಡುತ್ತಿದ್ದ ಯುವಕರು ಅರೆಸ್ಟ್!

ಬಂಟ್ವಾಳ: ಕೆಲ ದಿನಗಳಿಂದ ಇಡ್ಕಿದು ಗ್ರಾಮದ ಮುಂಡ್ರಬೈಲು ಎಂಬಲ್ಲಿ ಹದಿಹರೆಯದ ಯುವಕರ ತಂಡ ಯಾರೂ ಇಲ್ಲದ ನಿರ್ಜನ ಪ್ರದೇಶಕ್ಕೆ ಬಂದು ಗಾಂಜಾ ಮತ್ತು ಮಾದಕ ವಸ್ತುವನ್ನು ಸೇವಿಸಿ ಮಹಿಳೆಯರಿಗೆ ತೊಂದರೆ ಕೊಡುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಇಂದು ಕಾಟ ನೀಡಲು ಬಂದ ಮೂವರು ಯುವಕರು ಪೋಲಿಸರು ವಶಕ್ಕೆ ಪಡೆದಕೊಂಡ ಘಟನೆ ನಡೆದಿದೆ.

ಮಾದಕ ವಸ್ತು ಸೇವಿಸಿ ನಶೆಯೇರಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದರು ಎಂಬ ಮಾಹಿತಿ ಗ್ರಾಮಸ್ಥರಿಗೆ ತಿಳಿಸಿದ್ದರು. ಈ ದಿನ ಆದಿತ್ಯವಾರ ರಜಾ ದಿನವಾದ ಕಾರಣ ಮಾಹಿತಿ ತಿಳಿದ ಗ್ರಾಮಸ್ಥರು ಇಂದು ಕಾದು ಕುಳಿತಿದ್ದರು. ಇವತ್ತು ಅದೇ ಮಾದರಿಯಲ್ಲಿ ತನ್ನ ಚೇಷ್ಟೆ ಮಾಡಲು ಬಂದ ಯುವಕರು ಇನ್ನೇನು ತಮ್ಮ ಕೆಲಸ ಮಾಡಬೇಕೆನ್ನುವಷ್ಟರಲ್ಲಿ ಅವರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಕಂಬಳಬೆಟ್ಟು ನೂಜಿ ನಿವಾಸಿಗಳಾದ ಸಾಹಿಲ್‌, ಶಾಝ್, ಜಾಯಿ ಎನ್ನಲಾಗಿದೆ. ಆರೋಪಿಗಳಿಂದ 1 ಬೈಕ್‌ ಹಾಗೂ 1 ಸ್ಕೂಟರ್‌ನ್ನು ವಶಕ್ಕೆ ಪಡೆಯಲಾಗಿದೆ. ಈ ಮೊದಲು 3 ಜನರಲ್ಲೊಬ್ಬ ನೆಲ್ಲಿಗುಡ್ಡೆ ಎಂಬಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ವಿಚಾರದಲ್ಲಿ ಸ್ಥಳೀಯರಿಂದ ಗೂಸಾ ತಿಂದಿದ್ದ ಎಂಬ ಮಾಹಿತಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!