ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ ಪರಶುರಾಮ ಮೂರ್ತಿ ಕಂಚಿನದ್ದಲ್ಲ, ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಅಧಿಕಾರಿಗಳು, ದೃಢೀಕರಿಸಿದ ಉಸ್ತುವಾರಿ, ಏನಂತೀರಿ…. ಸುನಿಲ್ ಕುಮಾರ್ ಜನರ ತೆರಿಗೆ ದುಡ್ಡಿನಿಂದ ಮಜಾ ಮಾಡಿದ್ರಾ ಅಧಿಕಾರಿಗಳು ಮತ್ತು ಸುನಿಲ್!!

ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದ ಉಡುಪಿ ಜಿಲ್ಲೆಯ ಕಾರ್ಕಾಳದ ಬೈಲೂರು ಗ್ರಾಮದ ಉಮಿಕಲ್ ಬೆಟ್ಟದ ಮೇಲೆ ಮಾಜಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ನಿರ್ಮಿಸಲಾದ ಪರಶುರಾಮ ಮೂರ್ತಿ ಕಳಪೆ ಗುಣಮಟ್ಟದ್ದು, ಮೂರ್ತಿಯ ಗುಣಮಟ್ಟ ಉತ್ತಮ ಎಂದು ಹೇಳುವುದು ಕಷ್ಟ ಸಾಧ್ಯ  ಎಂಬ ಅರ್ಥದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದ್ದಾರೆ.

    ಪರಶುರಾಮ ಥೀಮ್ ಪಾರ್ಕ್‌ನ್ನು ಬಿಜೆಪಿ ಸರ್ಕಾರದ ಅವಧಿಯ ಕೊನೆಯಲ್ಲಿ ವಿಧಾನಸಭಾ ಚುನಾವಣೆಯ ಮೊದಲು  ಮುಖ್ಯಮಂತ್ರಿ ಬೊಮ್ಮಯಿ ಉದ್ಘಾಟಿಸಿದ್ದರು.

     15 ಕೋಟಿ ರು. ವೆಚ್ಚದಲ್ಲಿ, ಜನರ ತೆರಿಗೆ ದುಡ್ಡಿನಿಂದ ಬಂದ ಹಣದಲ್ಲಿ ಇಲಾಖೆಯ ವತಿಯಿಂದ  ನಿರ್ಮಿಸಲಾಗಿರುವ ಪರಶುರಾಮ ಥೀಮ್ ಪಾರ್ಕ್ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಸುದ್ದಿ ಕರಾವಳಿವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಈ  ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೂರ್ತಿಯನ್ನು ಪರಿಶೀಲಿಸಿ ಇದು ಅರ್ಧ ನಕಲಿ– ಅರ್ಧ ಅಸಲಿ ಎಂದು ಹೇಳಿ, ಇದರ ನಿರ್ಮಾಣಕ್ಕೆ ಕಾರಣರಾದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಅವ್ಯವಹಾರದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಿದ ಉಸ್ತುವಾರಿ ಸಚಿವರು, ಉಡುಪಿ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ತನಿಖೆಗೆ ಒಳಪಡಿಸುವ ಅಗತ್ಯವಿದ್ದು ಈ ಬಗ್ಗೆ ಉಸ್ತುವಾರಿ ಸಚಿವರು ಸುಳಿವು ನೀಡಿದ್ದಾರೆ, ಸಚಿವೆಗೆ ಸರಿಯಾದ ಉತ್ತರವನ್ನು ನೀಡುವುದಕ್ಕೆ ತಡವರಿಸಿದ ನಿರ್ಮಿತಿ ಕೇಂದ್ರದ  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಉಸ್ತುವಾರಿ ಸಚಿವರ ತನಿಖೆ ವೇಳೆ   ಮೂರ್ತಿ ಕಂಚಿನದಲ್ಲ, ಈಗಿರುವುದು ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಮೂರ್ತಿ, ಅದನ್ನು ತೆಗೆದು ನೈಜ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದು  ಅಧಿಕಾರಿಗಳು ಮಾಹಿತಿ ನೀಡಿದರು  ಎಂದು ವರದಿಯಾಗಿದೆ.

      ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಈ ನಕಲಿ ಮೂರ್ತಿ ಸ್ಥಾಪನೆಯ ಬಗ್ಗೆ ವರದಿ ಪಡೆದು ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಪ್ರತಿಮೆ ನಿರ್ಮಾಣ ಮಾಡಿರುವ ಬೆಂಗಳೂರಿನ ಕಲಾವಿದರಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!