ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಬಾಲ್ಯವಿವಾಹ; ಅಧಿಕಾರಿಗಳ ದಾಳಿ

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ಮನೆಗೆ ಸರಿಯಾದ ಸಮಯದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಮುಚ್ಚಳಿಕೆ ಬರೆಸಿಕೊಂಡು ಮದುವೆ ನಿಲ್ಲಿಸಿದ ಘಟನೆ ಬೆಳಕಿಗೆ ಬಂದಿದೆ.
‌‌ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕಿನ ಇರಾ ಎಂಬಲ್ಲಿ ನಡೆದಿದೆ.
ವಿಟ್ಲ ಸಿ.ಡಿ.ಪಿ.ಒ.ಇಲಾಖೆಯ ವ್ಯಾಪ್ತಿಗೊಳಪಟ್ಟ ಇರಾ ನಿವಾಸಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಉಳ್ಳಾಲ ತಾಲೂಕಿನ ಸಜೀಪ ನಡು ಗ್ರಾಮದ ಯುವಕನೋರ್ವನಿಗೆ ಮದುವೆ ನಡೆಸುವ ಉದ್ದೇಶದಿಂದ ನಿಶ್ಚಿತಾರ್ಥ ನಡೆದು , ಈ ದಿನ ಮದುವೆಗಾಗಿ ಹಾಲ್ ಕೂಡ ಫಿಕ್ಸ್ ಆಗಿತ್ತು.


ಮಿತ್ತಕೋಡಿ ರಾಯಲ್ ಗಾರ್ಡ್ ನಲ್ಲಿ ಇಂದು ಮದುವೆಗಾಗಿ ಎಲ್ಲಾ ತಯಾರಿಗಳು ನಡೆದಿತ್ತು.
ಬಾಲಕಿಯ ಮನೆಯಲ್ಲಿ ನಿನ್ನೆ ದಿನ ಮದರಂಗಿ ಕಾರ್ಯಗಳು ನಡೆಯುತ್ತಿದ್ದ ವೇಳೆ ಇಲಾಖೆಗೆ ಮಾಹಿತಿ ಬಂದಿದ್ದು, ಕೂಡಲೇ ಸಿ.ಡಿ.ಪಿ.ಒ. ಇಲಾಖೆಯ ಹಿರಿಯ ಮೇಲ್ವಿಚಾರಕಿ, ಗ್ರಾ.ಪಂಪಿ.ಡಿ.ಒ. ತಾ.ಪ.ಇಒ, ಕಂದಾಯ ನಿರೀಕ್ಷಕ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಬಂಟ್ವಾಳ ಗ್ರಾಮಾಂತರ ಪೋಲೀಸರು ಮನೆಗೆ ದಾಳಿ ನಡೆಸಿದ್ದಾರೆ.
ಅಪ್ರಾಪ್ತ ಬಾಲಕಿ ಎಂಬುದರ ಸಂಪೂರ್ಣ ದಾಖಲೆಗಳ ಮೂಲಕ ಮನೆಗೆ ಹೋಗಿರುವ ಅಧಿಕಾರಿಗಳು ಮನೆಯವರಿಗೆ ಕಾನೂನಾತ್ಮಕ ವಿಚಾರಗಳನ್ನು ತಿಳಿಸಿದ್ದಾರೆ. ಬಳಿಕ ಮದುವೆ ನಿಲ್ಲಿಸಲು ನಿರ್ಧರಿಸಿದ ಮನೆಯವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದರೆ.
ಅ ಬಳಿಕ ಮದುವೆ ಫಿಕ್ಸ್ ಆಗಿದ್ದ ವರನ‌ಕಡೆಯವರಿಗೆ ಮತ್ತು ಮದುವೆ ಹಾಲ್ ನ‌ ಮಾಲಕರಿಗೆ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. ಬಾಲಕಿಗೆ 18 ವರ್ಷ ತುಂಬದ ಕಾರಣ ಇದು ಬಾಲ್ಯವಿವಾಹವಾಗುತ್ತದೆ. ಹಾಗಾಗಿ ಕಾನೂನಿನಡಿಯಲ್ಲಿ ಬರುವ ವಿಚಾರಗಳನ್ನು ತಿಳಿಸಿ ಮದುವೆ ನಿಲ್ಲಿಸಲು ತಿಳಿಸಿದ್ದಾರೆ.
ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯರ ಬಾಲ್ಯವಿವಾಹಕ್ಕೆ ತಯಾರಾಗುವ ಅನೇಕ ಘಟನೆಗಳು ಬೆಳಕಿಗೆ ಬಂದಿವೆ. ಅಧಿಕಾರಿಗಳ ಕಾರ್ಯ ಪ್ರವೃತ್ತಿಯ ಕಾರಣ ಬೆಳಕಿಗೆ ಬಂದ ಪ್ರಕರಣಗಳನ್ನು ನಿಲ್ಲಿಸಲಾಗಿದೆ.
ಆದರೆ ಮತ್ತೆ ಮತ್ತೆ ಇಂತಹ ಘಟನೆಗಳು ಮರುಕಳಿಸುವ ಸಂಗತಿಗಳು ನಡೆಯುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ಇಲಾಖೆಯ ಮುಖಾಂತರ ಸರಿಯಾದ ಮಾಹಿತಿ ನೀಡುವ ಕೆಲಸ ಆಗಬೇಕಾಗಿದೆ ಎಂಬುದು ಸಾರ್ವಜನಿಕ ಆಗ್ರಹ…

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!