ಜನ ಮನದ ನಾಡಿ ಮಿಡಿತ

Advertisement

ಸ್ಕೂಟರ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು

ಸ್ಕೂಟರ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ರಾಷ್ಟರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್‌ನಿಂದ ಬಿದ್ದು ಅಪಘಾತಕ್ಕೀಡಾಗಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ (೫೨) ಮೃತ ದುರ್ದೈವಿ. ಮೂಲತಃ ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡಿಗೆ ಹೊರಡಲು ಸಹೋದರನ ಬೈಕ್‌ನಲ್ಲಿ ತೊಕ್ಕೊಟ್ಟು ಜಂಕ್ಷನ್‌ಗೆ ತೆರಳಿದವರು, ಜಪ್ಪಿನಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ವಾಪಾಸ್‌ ತೊಕ್ಕೊಟ್ಟು ಕಡೆಗೆ ಬರುವಾಗ ಈ ದುರಂತ ಸಂಭವಿಸಿದೆ.
ತೊಕ್ಕೊಟ್ಟು ಜಂಕ್ಷನ್‌ ಬದಲು ಕೋಟೆಕಾರು ಬೀರಿನವರೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ ತೊಕ್ಕೊಟ್ಟು ಫ್ಲೈ ಓವರ್‌ ಸಂಪರ್ಕಿಸುವ ಕೆರೆಬೈಲು ನಾಗನಕಟ್ಟೆ ಬಳಿ ಚಲಿಸುತ್ತಿದ್ದ ಸ್ಕೂಟರ್‌ನಿಂದ ಸುಮಾ ಉರುಳಿ ಬಿದದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತರು ಪತಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!