ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಆಕ್ಟೋಬರ್ 28 ಮತ್ತು 29 ರಂದು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆಯಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ”ದ ಕರಪತ್ರವನ್ನು ಕುಂದಾಪುರ ಯುವ ಬಂಟರ ಸಂಘದ ಸಭಾಭವನದಲ್ಲಿ ಬೈoದೂರಿನ ಮಾಜಿ ಶಾಸಕರಾದ ಬಿ.ಅಪ್ಪಣ್ಣ ಹೆಗ್ಡೆಯವರು ಅನಾವರಣಗೊಳಿಸಿದರು. ನಂತರ ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳಿಗೆ ಕುಂದಾಪುರ ಯುವ ಬಂಟರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಪ್ರೀತಿಪೂರ್ವಕವಾಗಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರನ್ನು ಹಾಗೂ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿಯವರನ್ನು ಅಧ್ಯಕ್ಷರು ಡಾ.ಅಂಪಾರು ನಿತ್ಯಾನಂದ ಶೆಟ್ಟಿಯವರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮೈಸೂರು ಬಂಟರ ಸಂಘದ ಅಧ್ಯಕ್ಷರಾದ ಟಿ. ಪ್ರಭಾಕರ್ ಶೆಟ್ಟಿಯವರು, ಕುಂದಾಪುರ ಯುವ ಬಂಟರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.







