ಜನ ಮನದ ನಾಡಿ ಮಿಡಿತ

Advertisement

ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪೋಲಿಸರು

ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು ತಾಲೂಕಿನ ಸುರತ್ಕಲ್ ಕೃಷ್ಣಾಪುರ ಚೋಕ್ಯಬೆಟ್ಟು ನಿವಾಸಿ ಮಹಮ್ಮದ್ ಅವರ ಮಗ ಮಹಮ್ಮದ್ ಶಾಫಿ ಬಂಧಿತ ಆರೋಪಿ.


‌ಈತ 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಇದರ ಜೊತೆಗೆ ಜಿಲ್ಲೆಯ ವಿವಿಧ ಠಾಣೆಯಲ್ಲಿ ಈತನ ಮೇಲೆ ಕಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಗಳಿದ್ದು, ಅ ಪ್ರಕರಣದಲ್ಲಿಯೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಬಂಟ್ವಾಳ ನಗರ ಪೋಲೀಸ್ ಠಾಣೆ, ವಿಟ್ಲ ಪೋಲಿಸ್ ಠಾಣೆ, ಉಪ್ಪಿನಂಗಡಿ, ಬೆಳ್ತಂಗಡಿ ಹಾಗೂ ಕೋಣಾಜೆ ಪೋಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಪ್ರಕರಣ ದಾಖಲಾಗಿದ್ದು, ಈತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದೀಗ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಇನ್ಸ್ ಪೆಕ್ಟರ್ ಶಿವಕುಮಾರ್, ಹಾಗೂ ಉಪನಿರೀಕ್ಷಕರಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿ ಗಳಾದ ಗಣೇಶ್ ಪ್ರಸಾದ್, ಪುನೀತ್ ಕುಮಾರ್ , ವಿಜಯಕುಮಾರ್ , ರಂಜಾನ್ ಅವರು ಪುತ್ತೂರಿನಲ್ಲಿ ಬಂಧಿಸಿ , ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!