ಜನ ಮನದ ನಾಡಿ ಮಿಡಿತ

Advertisement

ಮೂಡಬಿದಿರೆ: ಆಳ್ವಾಸ್ ಕಾಲೇಜು ಎನ್‌ಎಸ್‌ಎಸ್ ಘಟಕ ಉದ್ಘಾಟನೆ

ಮೂಡಬಿದಿರೆ: ಮಕ್ಕಳೆಂದರೆ ಪ್ರಶ್ನೆ, ಆಸಕ್ತಿ, ಕ್ರಿಯಾಶೀಲತೆ, ಚಟುವಟಿಕೆಯ ದ್ಯೋತಕ. ಆದುದರಿಂದ ವಿದ್ಯಾರ್ಥಿಗಳು ಯಾವಾಗಲೂ ಮಗುವಿನ ಮನಸ್ಥಿತಿಯನ್ನು ಉಳಿಸಿಕೊಳ್ಳಬೇಕು. ರಾಷ್ಟ್ರೀಯ ಸ್ವಯಂ ಸೇವಾ ವಿದ್ಯಾರ್ಥಿ ಮಾಡುವ ಎಲ್ಲಾ ಚಟುವಟಿಕೆಗಳು ರಾಷ್ಟ್ರೀಯತೆಯಿಂದ ಕೂಡಿರಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.

ಇವರು ಆಳ್ವಾಸ್ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ 2023-24ರ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಸೇವೆಯು ಶಾಶ್ವತವಾಗಿ ಸಂತೋಷ ನೀಡುತ್ತದೆ. ಆದುದರಿಂದ ವಿದ್ಯಾರ್ಥಿಗಳು ಕ್ಷಣಿಕ ಸಂತೋಷಕ್ಕೆ ಯತ್ನಿಸದೇ ಸೇವೆಯ ಮೂಲಕ ಶಾಶ್ವತ ಸಂತೋಷಕ್ಕೆ ಪ್ರಯತ್ನಿಸಬೇಕೆಂದು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಎನ್‌ಎಸ್‌ಎಸ್ ಸಂಯೋಜನಾಧಿಕಾರಿಗಳಾದ ವಸಂತ್, ಅಕ್ಷತಾ ಪ್ರಭು, ಶ್ರೇಯಸ್ವಿ, ಅಪರ್ಣ ಹಾಗೂ ವಿದ್ಯಾರ್ಥಿ ಕಾರ್ಯದರ್ಶಿ ಆದಿತ್ಯ ನಾಯಕ್ ಸಹ ಕರ‍್ಯದರ್ಶಿ ಸಮೀಕ್ಷಾ, ಯುನಿಟ್ ಲೀಡರ್‌ಗಳಾದ ಆದಿಶ್, ದಿಶಾ, ಸೂರಜ್, ವರ್ಷಿತಾ, ಅನನ್ಯಾ, ಸೃಜನ್, ಸನ್ವಿತ್ ಉಪಸ್ಥಿತರಿದ್ದರು. ಶಶಾಂಕ್ ಪರಿಚಯ ಭಾಷಣ ಮಾಡಿದರು. ಸ್ವೀಕೃತ್ ಸ್ವಾಗತಿಸಿ, ಧೀರಜ್ ವಂದಿಸಿ, ಆದರ್ಶ್ ಕಾರ್ಯಕ್ರಮ ನಿರೂಪಿಸಿದರು. ಸನ್ವಿತ್ ಅತಿಥಿಗಳನ್ನು ಪರಿಚಯಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!